ಭ್ರಷ್ಟರ ಪರ ನಿಲ್ಲುವ, ಜನರ ಎದುರು ಕಣ್ಣೀರು ಸುರಿಸುವ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ: ಸಚಿವೆ ಸ್ಮೃತಿ ಇರಾನಿ ಆರೋಪ

Latest News

ನಿವಾಸಿಗಳಿಗೆ ಕೊಳಚೆ ನೀರೇ ಗತಿ

 ಕಲಬುರಗಿ: ನದಿಸಿಣ್ಣೂರ ಗ್ರಾಮದ ಹರಿಜನವಾಡ ಮತ್ತು ಕುರುಬರ ಓಣಿಗೆ ನೀರು ಪೂರೈಸುವ ಪೈಪ್ಲೈನ್ ಮತ್ತು ಅದರ ರಕ್ಷಣೆಗೆ ಹಾಕಿದ್ದ ಮಣ್ಣು ಭೀಮಾ ನದಿ...

ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ

ವಾದಿರಾಜ ವ್ಯಾಸಮುದ್ರ ಕಲಬುರಗಿಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಕಲಬುರಗಿಯಿಂದ ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಮಾನ ನಿಲ್ದಾಣ ಶುರುವಾಗಬೇಕೆಂಬ ದಶಕದ ಕನಸು...

ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜು

ಕಲಬುರಗಿ: ಬಹನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಶುಕ್ರವಾರ ನಡೆಯಲಿದ್ದು, ಐತಿಹಾಸಿಕ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಅಗತ್ಯ ಸಿದ್ಧತೆ ಬಹುತೇಕ ಪೂರ್ಣಗೊಂಡಿದ್ದು, ಸಣ್ಣ...

ಏ.10 ರವರೆಗೆ ಎಡದಂಡೆ ನಾಲೆಗೆ ನೀರು

ರೈತರಿಗೆ ಶಾಸಕ ವೆಂಕಟರಾವ್ ನಾಡಗೌಡ ಭರವಸೆ | ಗೊಂದಲ ಮಾಡಿಕೊಳ್ಳಲಿರಲು ಸಲಹೆಸಿಂಧನೂರು: ಮುಂಗಾರು ಮತ್ತು ಬೇಸಿಗೆ ಬೆಳೆಗೆ ನೀರು ಒದಗಿಸಲು ತುಂಗಭದ್ರಾ ಎಡದಂಡೆ...

ಉಪ ಚುನಾವಣೆ ಫಲಿತಾಂಶದ ನಂತರ ನನ್ನ ಲೋಕಸಭಾ ಕ್ಷೇತ್ರದಲ್ಲಿ 3 ಸಚಿವರು ಇರುತ್ತಾರೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಯಶವಂತಪುರ: ನನ್ನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಏಕೈಕ ಶಾಸಕರಿದ್ದಾರೆ ಎಂಬ ಕೊರಗು ಇತ್ತು. ಉಪ ಚುನಾವಣೆ ನಂತರ ಶಾಸಕರ ಸಂಖ್ಯೆ ಹೆಚ್ಚಿ ಕೊರಗು...

ಕೋಲಾರ: ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಭ್ರಷ್ಟರ ಬಗ್ಗೆ ಇರುವ ಕಾಳಜಿ ರಾಜ್ಯದ ರೈತರ ಮೇಲೆ ಇಲ್ಲ. ಹಾಗಾಗಿ ಲೂಟಿಕೋರರ ಪರವಾಗಿ ನಿಂತು ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿ ಪರ ಪ್ರಚಾರ ನಡೆಸಿದ ಅವರು ನಂತರ ಮಾತನಾಡಿ, ರಿಮೋಟ್​ ಕಂಟ್ರೋಲ್​ ಮುಖ್ಯಮಂತ್ರಿಗಳೇ ಭ್ರಷ್ಟರ ಪರ ನಿಲ್ಲುವುದನ್ನು ಬಿಡಿ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್​ಗೆ ದೇಶಭಕ್ತಿ ಇಲ್ಲ. ಕೋಲಾರದ ರೈತರು ಪಾಕ್​ಗೆ ಟೊಮ್ಯಾಟೋ ನೀಡದೆ ತಮ್ಮ ದೇಶದ ಬಗೆಗಿನ ಪ್ರೀತಿ ತೋರಿಸಿದರು. ಆದರೆ ಕಾಂಗ್ರೆಸ್​ನವರು ಪುಲ್ವಾಮಾ ದಾಳಿಗೆ ಸಾಕ್ಷಿ ಕೇಳುತ್ತಾರೆ. ಇಲ್ಲಿನ ರೈತರಿಗೆ ಇರುವಷ್ಟು ದೇಶಭಕ್ತಿ ಆ ಪಕ್ಷಕ್ಕಿಲ್ಲ. ನಮ್ಮ ಸೈನಿಕರು ಆತಂಕವಾದಿಗಳಿಗೆ ಅವರ ನೆಲಕ್ಕೇ ಹೋಗಿ ಪಾಠ ಕಲಿಸಿದರು. ಇದು ನರೇಂದ್ರ ಮೋದಿಯವರ ಸರ್ಕಾರದಿಂದ ಸಾಧ್ಯವಾಯಿತು ಎಂದು ಹೇಳಿದರು.

ರೈತರಿಗಾಗಿ ಕಿಸಾನ್​ ಸಮ್ಮಾನ್​
ರೈತರಿಗಾಗಿ ಮೋದಿಯವರು ಕಿಸಾನ್​ ಸಮ್ಮಾನ್​ ಯೋಜನೆ ಜಾರಿಗೊಳಿಸಿದ್ದಾರೆ. ಇದರ ಅನ್ವಯ ಪ್ರತಿ ವರ್ಷ ರೈತರ ಖಾತೆಗಳಿಎ 6 ಸಾವಿರ ರೂಪಾಯಿ ನೀಡಲಾಗುತ್ತದೆ. ರಾಜ್ಯದ ಮೈತ್ರಿ ಸರ್ಕಾರ ರೈತರ ಪಟ್ಟಿ ನೀಡಲು ವಿಳಂಬ ಮಾಡುತ್ತಿದೆ ಎಂದು ಸ್ಮೃತಿ ಇರಾನಿ ತಿಳಿಸಿದರು.

ಕಾಂಗ್ರೆಸ್​ನಿಂದ ರಾಮಜಪ
ರಾಮನಿಗೆ ಅಸ್ತಿತ್ವವೇ ಇಲ್ಲ, ರಾಮನೇ ಇಲ್ಲವೆಂದ ಕಾಂಗ್ರೆಸ್​ ಈಗ ಚುನಾವಣೆ ಬಂದ ತಕ್ಷಣ ಬೀದಿಯಲ್ಲಿ ರಾಮಜಪ ಮಾಡುತ್ತಿದೆ. ಪ್ರಣಾಳಿಕೆಯಲ್ಲಿ ರಾಮಮಂದಿರ ಪ್ರಸ್ತಾಪ ಮಾಡಿದೆ. ಈ ಮೂಲಕ ವೋಟ್​ ಬ್ಯಾಂಕ್​ ರಾಜಕಾರಣಕ್ಕೆ ಮುಂದಾಗಿದೆ ಎಂದು ಆರೋಪ ಮಾಡಿದರು.

ಕಣ್ಣೀರು ಹಾಕುವ ಸಿಎಂ
ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಏಳು ಬಾರಿ ಗೆದ್ದ ಕೆ.ಎಚ್​.ಮುನಿಯಪ್ಪನವರಿಗೆ ನೀರು ಕೊಡಲು ಸಾಧ್ಯವಾಗಲಿಲ್ಲ. ಜಾತಿಗಳ ನಡುವೆ ಜಗಳವಿಟ್ಟು ರಾಜಕಾರಣ ನಡೆಸುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ತಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲವೆಂದು ಜನರ ಎದುರು ಕಣ್ಣೀರು ಹಾಕುತ್ತಿದ್ದಾರೆ ಎಂದು ಟೀಕಿಸಿದರು.

- Advertisement -

Stay connected

278,670FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...