ಪುಟ್ಟಣ್ಣಯ್ಯ ಸಾವಿನ ಸುದ್ದಿ ದಿಗ್ಭ್ರಮೆ ಮೂಡಿಸಿದೆ: ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದು, ರೈತ ಹೋರಾಟಗಾರ ಹಿರಿಯ ಕೆ.ಎಸ್. ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು ಮಾಡಿದೆ ಎಂದು ತಿಳಿಸಿದರು.

ರೈತ ಸಂಘ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ. ಬಹುಕಾಲದ ಸ್ನೇಹಿತನ ಅಗಲಿಕೆ ನನಗೆ ಅತೀವ ನೋವು ತಂದಿದೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆ ಎಂದು ಹೇಳಿದರು.

ಕುರುಬೂರು ಶಾಂತಕುಮಾರ್ ಮಾತನಾಡಿ, ರಾಜ್ಯದ ರೈತರ ಪಾಲಿಗೆ ತುಂಬಲಾರದ ನಷ್ಟವಾಗಿದೆ. ಕೆ.ಎಸ್.ಪುಟ್ಟಣ್ಣಯ್ಯನವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಿಳಿಸಿದರು.

ಕೆ.ಎಸ್.ಪುಟ್ಟಣ್ಣಯ್ಯ ನಿಧನಕ್ಕೆ ಸಚಿವ ಮಹದೇವಪ್ಪ ಸಂತಾಪ ಸೂಚಿಸಿ, ರೈತರ ಮುಖಂಡರಾಗಿ ರೈತರ ಪರವಾಗಿ ಹಲವಾರು ಹೋರಾಟ ಮಾಡಿದ್ದಾರೆ. ಬಡವರ, ಮಹಿಳೆಯರ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾದ ನಷ್ಟ ಉಂಟಾಗಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.

ಕ್ಯಾತನಹಳ್ಳಿಗೆ ಸಂಸದ ಸಿ ಎಸ್ ಪುಟ್ಟರಾಜು ಭೇಟಿ ನೀಡಿ, ಶಾಸಕ ಪುಟ್ಟಣ್ಣಯ್ಯರ ಅಂತಿಮ ದರ್ಶನ ಪಡೆದರು. ಪುಟ್ಟಣ್ಣಯ್ಯ ಅಗಲಿಕೆ ಅತೀವ ನೋವು ತಂದಿದೆ. ಅವರ ದೇಹ ನಮ್ಮನ್ನ ಬಿಟ್ಟು ಹೋಗಿರಬಹುದು.
ಅವರ ಆದರ್ಶ ನಮ್ಮ ಜತೆ ಇದೆ. ಅವರ ಹೋರಾಟದ ಹಾದಿಯಲ್ಲಿ ನಾವು ಸಾಗ್ತೀವಿ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದರು.

ಸಂಸದ ಆರ್‌.ಧ್ರುವನಾರಾಯಣ, ಮೈಸೂರು ಬಣ್ಣ, ಅರಗು ಕಾರ್ಖಾನೆ ಅಧ್ಯಕ್ಷ ಎಚ್.ಎ.ವೆಂಕಟೇಶ್ ಸಂತಾಪ ಸೂಚಿಸಿದ್ದಾರೆ. (ದಿಗ್ವಿಜಯ ನ್ಯೂಸ್‌)

ಮತ್ತಷ್ಟು ಸುದ್ದಿಗಳು 

 

Leave a Reply

Your email address will not be published. Required fields are marked *