More

    ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಎನ್. ಭೃಂಗೀಶ್​ ನೇಮಕ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪರ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್​ ಅವರನ್ನು ನೇಮಕ ಮಾಡಲಾಗಿದೆ.

    ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಇತ್ತೀಚಿಗಷ್ಟೇ (ನ.19) ಸಿಎಂ ಯಡಿಯೂರಪ್ಪಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು.

    ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಎನ್. ಭೃಂಗೀಶ್​ ನೇಮಕಮಹದೇವ್​ ಪ್ರಕಾಶ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ‌ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್.ಭೃಂಗೀಶ್​ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸುವಂತೆ ಸಿಎಂ ಮುಖ್ಯ ಕಾರ್ಯದರ್ಶಿಗೆ ಬಿಎಸ್​ವೈ ಮಂಗಳವಾರ ಸೂಚಿಸಿದ್ದರು. ಅದರಂತೆ ಎನ್.ಭೃಂಗೀಶ್​ ಅವರನ್ನು ತತ್​ಕ್ಷಣದಿಂದಲೇ ಜಾರಿಗೆ ಬರುವಂತೆ ಸಿಎಂ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಇಂದು(ಬುಧವಾರ) ಅಧಿಕೃತ ಆದೇಶ ಹೊರಡಿಸಲಾಗಿದೆ.

    ವೈಯಕ್ತಿಕ ಕಾರಣಗಳಿಂದ ಮಹದೇವ ಪ್ರಕಾಶ್ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರದಲ್ಲಿ ಅವರು ಯಾವುದೇ ಕಾರಣಗಳನ್ನು ನೀಡಿರಲಿಲ್ಲ.

    ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಸ್ಥಾನಕ್ಕೆ ಮಹಾದೇವ ಪ್ರಕಾಶ್ ರಾಜೀನಾಮೆ

    ದುಡ್ಡು ಸಿಗುತ್ತೆ ಅಂತ ಗಂಡನ ಮನೆಗೆ ಓಡೋಡಿ ಬಂದವಳು ಆ ಮನೆಯಲ್ಲೇ ಹೆಣವಾದಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts