Wednesday, 12th December 2018  

Vijayavani

ಅಂತೂ ಹೊರಬಿತ್ತು ಮಧ್ಯಪ್ರದೇಶದ ಫಲಿತಾಂಶ: ಅತಂತ್ರ ರಾಜ್ಯದಲ್ಲಿ ಯಾರಿಗೆ ಅಧಿಕಾರ?        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಮಾಡಲು ಕಾಂಗ್ರೆಸ್​ ಮತ್ತು ಬಿಜೆಪಿ ಎರಡೂ ಪಕ್ಷಗಳಿಂದಲೂ ಹಕ್ಕು ಮಂಡನೆ        ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತೆಯ ಕುರಿತು ಚರ್ಚಿಸಲು ರಾಜ್ಯಸಭೆಯಲ್ಲಿ ಸಮಯ ಕೋರಿದ ಟಿಎಂಸಿ        ರಾಹುಲ್​ ಗಾಂಧಿಯನ್ನು ದೇಶ ಒಪ್ಪಿಕೊಳ್ಳುತ್ತಿದೆ ಎಂದ ಎಂಎನ್​ಎಸ್​ ವರಿಷ್ಠ ರಾಜ್​ ಠಾಕ್ರೆ        ತೆಲಂಗಾಣದ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಕೆ. ಚಂದ್ರಶೇಖರ್​ ರಾವ್​       
Breaking News

ಸರ್ಕಾರವನ್ನು ಟೀಕಿಸಿ ವಿಡಿಯೋ ಮಾಡಿದ್ದ ಬಾಲಕನ ಮನೆಗೆ ಭೇಟಿ ನೀಡಲಿದ್ದಾರೆ ಸಿಎಂ

Saturday, 14.07.2018, 5:11 PM       No Comments

ಬೆಂಗಳೂರು: ಮಳೆ ಹಾನಿಯಿಂದಾಗಿ ಕೊಡಗಿನ ರೈತರಿಗೆ ಎದುರಾಗಿರುವ ಸಮಸ್ಯೆಯನ್ನು ವಿಡಿಯೋ ಮಾಡಿ ಸಾಮಾಜಿಕ ತಾಣಕ್ಕೆ ಹರಿಬಿಟ್ಟಿದ್ದ ಬಾಲಕನ ಮನೆಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಇಂದು ಜೆಡಿಎಸ್​ ಕಚೇರಿಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ತಮ್ಮ ವಿರುದ್ಧ ವ್ಯಕ್ತವಾಗುತ್ತಿರುವ ವಿರೋಧಗಳ ಕುರಿತು ಚರ್ಚಿಸುತ್ತಿದ್ದರು. ಈ ವೇಳೆ, ಸರ್ಕಾರವನ್ನು ಟೀಕೆ ಮಾಡಿದ್ದ ಬಾಲಕನ ವಿಡಿಯೋ ವಿಚಾರವನ್ನೂ ಉಲ್ಲೇಖಿಸಿದ ಸಿಎಂ, “ಬಿಜೆಪಿಯವರು ಕೊಡಗಿನ ಹುಡುಗನ ಮೂಲಕ ಸರ್ಕಾರವನ್ನು ಟೀಕೆ ಮಾಡಿಸುತ್ತಿದ್ದಾರೆ. ಇಂಥ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿಸುತ್ತಿದ್ದಾರೆ. ನಾನು ಆ ಹುಡುಗನ ಮನೆಗೇ ಹೋಗುತ್ತೇನೆ. ಕೊಡಗಿನವರ ಸಮಸ್ಯೆ ಕೇಳುತ್ತೇನೆ, ಎಂದು ಘೋಷಿಸಿದರು.

ಇದನ್ನೂ ಓದಿ:  ಕೊಡವರ ನೆರವಿಗೆ ಬರುವಂತೆ ಸಿಎಂಗೆ ಮೊರೆ: ವಿಡಿಯೋದಲ್ಲಿ ವಿದ್ಯಾರ್ಥಿಯ ಆರ್ತನಾದ

Leave a Reply

Your email address will not be published. Required fields are marked *

Back To Top