ಫ್ರೂಟ್ಸ್ ತಂತ್ರಾಂಶ ನೋಂದಣಿಗೆ ಸಲಹೆ

ಚಿಕ್ಕಜಾಜೂರು: ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸುವ ಮೂಲಕ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಇಲಾಖೆಗಳ ಸೌಲಭ್ಯ ಬಳಸಿಕೊಳ್ಳಬೇಕೆಂದು ಕೃಷಿ ಅಧಿಕಾರಿ ಎ.ಒ.ಧನರಾಜ್ ತಿಳಿಸಿದರು.

ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಕೃಷಿ ಇಲಾಖೆ ಮಂಗಳವಾರ ಏರ್ಪಡಿಸಿದ್ದ ಸಮಗ್ರ ಕೃಷಿ ಅಭಿಯಾನದ ರಥ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಅಗತ್ಯ ದಾಖಲೆಗಳೊಂದಿಗೆ ಶೀಘ್ರವೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಗೆ ಭೇಟಿ ನೀಡಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಬೇಕು. ಈ ಕಾರ್ಯ ಆಗದ ಹೊರತು ಯಾವುದೇ ಸೌಲಭ್ಯ ಪಡೆಯಲು ಸಾಧ್ಯವಿಲ್ಲ ಎಂದರು.

ಸಹಾಯಕ ಕೃಷಿ ಅಧಿಕಾರಿ ರಾಮಚಂದ್ರಪ್ಪ, ಪ್ರಗತಿಪರ ರೈತರಾದ ಯೋಗೇಶ್, ಮಧುಸೂದನ್ ಇತರರಿದ್ದರು.

Leave a Reply

Your email address will not be published. Required fields are marked *