More

    ಚಿಕ್ಕಬಳ್ಳಾಪುರ ಜಿಲೆಟಿನ್​ ಸ್ಫೋಟ ದುರಂತ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿಎಂ ಬಿಎಸ್​ವೈ ಸೂಚನೆ

    ಬೆಂಗಳೂರು: ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಮರುಕ ವ್ಯಕ್ತಡಿಸಿದ್ದಾರೆ.

    ಘಟನೆ ಸಂಬಂಧ ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಸಿಎಂ ಬಿಎಸ್​ವೈ, ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿರಿ: ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮಕ್ಕೆ ಹೆದರಿ ಹೀಗೆ ಮಾಡಿಕೊಂಡಿದ್ದಾರೆ: ಸಚಿವ ಸುಧಾಕರ್​

    ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದ್ದಾರೆ.

    ನಿನ್ನೆ ಮಧ್ಯರಾತ್ರಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹೀರೇನಾಗವಲ್ಲಿ ಗ್ರಾಮದ ಬಳಿ ಇರುವ ಕಲ್ಲು ಗಣಿಗಾರಿಕೆಯಲ್ಲಿ ಜಿಲೆಟಿನ್​ ಸ್ಫೋಟದಿಂದಾಗಿ ಆರು ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಗಣಿಸ್ಫೋಟದ ತೀವ್ರತೆಗೆ 5 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ನೂರಾರು ಮೀಟರ್ ದೂರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ಡಿಮಾರ್ಟ್​ನಿಂದ ಮನೆಗೆ ಮರಳಿದ ಮಹಿಳೆಗೆ ಶಾಕ್​: ಪತಿಯ ಸ್ಥಿತಿ ಕಂಡು ಕುಸಿದುಬಿದ್ದ ಪತ್ನಿ!

    ಮೀಸಲು ಧ್ವನಿಯಲ್ಲಿ ಒಡಕು: ಪಂಚಮಸಾಲಿ ಹೋರಾಟದಲ್ಲಿ ರಾಜಕೀಯ; ವಿಭಜನೆಯ ಕಾರ್ಮೋಡ..

    ಕೇಂದ್ರ ಸಚಿವರ ಕಾರನ್ನು ಓವರ್​ಟೇಕ್​ ಮಾಡಿದ ಪ್ರವಾಸಿಗರಿಗೆ ಕಾದಿತ್ತು ಬಿಗ್​ ಶಾಕ್​..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts