21.7 C
Bengaluru
Tuesday, January 21, 2020

ಉಪ ಚುನಾವಣೆ ಮತ ಎಣಿಕೆಗೆ ಲೋಪದ ಆಸ್ಪದ ಬೇಡ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಚಿಕ್ಕಬಳ್ಳಾಪುರ: ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶ ನೀಡದೇ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಮತ ಎಣಿಕೆಯ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಡಿ.9 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ನಿಯೋಜಿತ ಸಿಬ್ಬಂದಿ ಕಟ್ಟುನಿಟ್ಟಾಗಿ ಆಯೋಗದ ಮಾರ್ಗಸೂಚಿ ಪಾಲಿಸಬೇಕು. ಸುಗಮ ಮತ ಎಣಿಕೆಗೆ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಈಗಾಗಲೇ ಮತ ಎಣಿಕೆ ಮೇಲ್ವಿಚಾರಕರು, ಸಹಾಯಕ ಅಧಿಕಾರಿಗಳು ಹಾಗೂ ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿದೆ. ಪ್ರತಿಯೊಬ್ಬರು ಬೆಳಗ್ಗೆ 6 ರೊಳಗೆ ಎಣಿಕೆ ಕೇಂದ್ರದಲ್ಲಿ ಹಾಜರಿರಬೇಕು. ಯಾವುದೇ ಕಾರಣಕ್ಕೂ ಮೊಬೈಲ್ ಫೋನ್‌ಗಳನ್ನು ತರಬಾರದು ಎಂದು ಸೂಚಿಸಿದ ಅವರು, ಬೆಳಗ್ಗೆ ಉಪಾಹಾರ ಮತ್ತು ಊಟದ ವ್ಯವಸ್ಥೆ ಇರುತ್ತದೆ ಎಂದು ತಿಳಿಸಿದರು.
ಎಣಿಕೆ ಕಾರ್ಯ 10 ಟೇಬಲ್ ಮತ್ತು 26 ಸುತ್ತುಗಳಲ್ಲಿ ನಡೆಯಲಿದ್ದು, ಅಧಿಕಾರಿ ಮತ್ತು ಸಿಬ್ಬಂದಿ ಸೇರಿ ಎಲ್ಲರೂ ಕಡ್ಡಾಯವಾಗಿ ಗುರುತಿನ ಚೀಟಿ ಹೊಂದಿರಬೇಕು. ಮೇಲ್ವಿಚಾರಕರು ಮತ ಎಣಿಕೆಗೆ ಅವಶ್ಯವಿರುವ ಸಾಮಗ್ರಿಗಳ ವ್ಯವಸ್ಥೆ ಮಾಡಬೇಕು ಎಂದರು.
ಮತ ಎಣಿಕೆ ಕಾರ್ಯ ಯಶಸ್ವಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು, ಕೇಂದ್ರದ ಸುತ್ತಲು ಸ್ವಚ್ಚತೆ ಕಾಪಾಡಲು, ಕೇಂದ್ರದಲ್ಲಿ ನೀರಿನ ವ್ಯವಸ್ಥೆಯನ್ನು ಒದಗಿಸಲು ಪೌರಾಯುಕ್ತರಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಉಪ ವಿಭಾಗಾಧಿಕಾರಿ ಎ.ಎನ್. ರಘುನಂದನ್, ಡಿವೈಎಸ್‌ಪಿ ರವಿಶಂಕರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ನೋಮೇಶ್‌ಕುಮಾರ್ ಇತರರಿದ್ದರು.
ಮದ್ಯ ಮಾರಾಟ ನಿಷೇಧ: ಮತ ಏಣಿಕೆ ಹಿನ್ನೆಲೆಯಲ್ಲಿ ಡಿ.8 ರ ಮಧ್ಯರಾತ್ರಿ 12 ರಿಂದ ಡಿ.9 ರ ಮಧ್ಯರಾತ್ರಿ 12 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ವೈನರಿ ಘಟಕಗಳು ಹಾಗೂ ಮದ್ಯದಂಗಡಿಗಳಲ್ಲಿ ಮದ್ಯ ಶೇಖರಣೆ, ಸಾಗಾಣಿಕೆ ಹಾಗೂ ಮಾರಾಟ ಮಾಡಬಾರದು. ಅಬಕಾರಿ ಸನ್ನದುಗಳ ಬಾಗಿಲು ಮುಚ್ಚಬೇಕು. ಆದೇಶ ಉಲ್ಲಂಘಿಸಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ನಿಷೇಧಾಜ್ಞೆ ಘೋಷಣೆ : ಮತ ಎಣಿಕೆ ಪ್ರಕ್ರಿಯೆ ವೇಳೆ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಲು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಡಿ. 9ರ ಬೆಳಗ್ಗೆ 6 ರಿಂದ ಡಿ.10 ರ ಬೆಳಗ್ಗೆ 6 ರವರೆಗೆ ನಿಷೇಧಾಜ್ಞೆ ಘೋಷಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...