More

    ಮಂಜಿನ ನಡುವೆ ಹಾರಿದ ತಿರಂಗ, ಧ್ವಜಾರೋಹಣ ನೆರವೇರಿಸಿದ ಸಚಿವ ಡಾ ಕೆ.ಸುಧಾಕರ್

    ಚಿಕ್ಕಬಳ್ಳಾಪುರ : ಜಿಲ್ಲಾದ್ಯಂತ 72ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ದಟ್ಟ ಮಂಜಿನ ನಡುವೆ ಜಿಲ್ಲಾಕೇಂದ್ರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ತೆರೆದ ವಾಹನದಲ್ಲಿ ತೆರಳಿ ಪಥ ಸಂಚಲನ ತಂಡಗಳ ಗೌರವ ವಂದನೆ ಸ್ವೀಕರಿಸಿದರು.
    ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್‌ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಶಸ್ತ್ರ ಮೀಸಲು ಪಡೆ, ನಾಗರಿಕ ಪೊಲಿಸ್ ಪಡೆ, ಗೃಹರಕ್ಷಕ ದಳ, ಮಹಿಳಾ ಪೊಲೀಸ್ ಪಡೆ, ಪ್ರಥಮ ದರ್ಜೆ ಕಾಲೇಜಿನ ಎನ್‌ಸಿಸಿ ತಂಡ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿತು.
    ಪ್ರತಿವರ್ಷ ನಡೆಯುತ್ತಿದ್ದ ವಿವಿಧ ಶಾಲೆಗಳ ವಿದ್ಯಾರ್ಥಿಗಳ ಪಥಸಂಚಲನ, ನೃತ್ಯ ಕಾರ್ಯಕ್ರಮಕ್ಕೆ ಕರೊನಾ ಹಿನ್ನೆಲೆಯಲ್ಲಿ ಈ ಬಾರಿ ಬ್ರೇಕ್ ಹಾಕಲಾಗಿತ್ತು, ಮುಂಜಾಗ್ರತಾ ಕ್ರಮವಾಗಿ ಕಾರ್ಯಕ್ರಮವು ಪಥಸಂಚಲನಕ್ಕೆ ಸೀಮಿತವಾಯಿತು.
    ರಾಜ್ಯ ಮಾವು ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ತಾಪಂ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದ್ ರೆಡ್ಡಿ ಮತ್ತಿತರರು ಇದ್ದರು.

    ನೆನಪಿನ ಕಾಣಿಕೆ, ಸನ್ಮಾನ:
    ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿರುವ ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಪಿ.ವಿ.ರಮೇಶ್ ಮತ್ತು ಆಡಳಿತ ವೈದ್ಯಾಧಿಕಾರಿ ಎಲ್.ವಿಜಯಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು. ಪ್ರತಿ ವರ್ಷದಂತೆ ಗಣರಾಜ್ಯೋತ್ಸವದಂದು ಸವೋತ್ತಮ ಪ್ರಶಸ್ತಿ ನೀಡಲು ಉಪ ವಿಭಾಗಾಧಿಕಾರಿಗಳ ಕಚೇರಿಯಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ, ಕೊನೇ ಕ್ಷಣದಲ್ಲಿ ರದ್ದುಪಡಿಸಲಾಗಿತ್ತು.

    ಕಡಿಮೆ ಸಭಿಕರು, ದಟ್ಟವಾದ ಮಂಜು
    ಬೆಳಗ್ಗೆ 9 ಗಂಟೆಯಾದರೂ ಜಿಲ್ಲಾದ್ಯಂತ ದಟ್ಟವಾಗಿ ಮಂಜು ಹರಡಿಕೊಂಡಿತ್ತು. ಪಥಸಂಚಲನದ ತಂಡಗಳು ಸೇರಿ ಹಲವರು ಚಳಿಯಲ್ಲೇ ರಾಷ್ಟ್ರೀಯ ಹಬ್ಬಕ್ಕೆ ಸಜ್ಜಾದರು. ಕಾರ್ಯಕ್ರಮಕ್ಕೆ ಪ್ರಾರಂಭವಾಗುತ್ತಿದ್ದಂತೆ ಬಿಸಿಲು ಹೆಚ್ಚಾಯಿತು. ಮತ್ತೊಂದೆಡೆ ವೇದಿಕೆಯಲ್ಲಿ ಕಡಿಮೆ ಸಂಖ್ಯೆಯ ಸಭಿಕರು ಕಂಡು ಬಂದರು. ಬಹುತೇಕ ಆಸನಗಳು ಖಾಲಿ ಇದ್ದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts