More

    ರಾಜ್ಯದ ಕೃಷಿ ಕಾಯ್ದೆಗಳ ರದ್ದು ಯಾವಾಗ? : ರೈತಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನೆ

    ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಜಾರಿ ತಂದಿದ್ದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ, ಆದರೆ ರಾಜ್ಯದಲ್ಲಿ ಜಾರಿಗೆ ತಂದಿರುವ ಕಾಯ್ದೆಗಳ ರದ್ದತಿಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡುತ್ತಿಲ್ಲ. ಸ್ಪಷ್ಟನೆಯನ್ನೂ ನೀಡದೆ ಮೌನವಾಗಿದ್ದಾರೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

    ದೆಹಲಿ ರೈತ ಹೋರಾಟಕ್ಕೆ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ತಾಲೂಕಿನ ಚದಲಪುರ ಕ್ರಾಸ್ ಬಳಿ ಶುಕ್ರವಾರ ಕೈಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಂಚಾರ ತಡೆ ಚಳವಳಿಯಲ್ಲಿ ಮಾತನಾಡಿದರು. ಕೃಷಿ, ವಿದ್ಯುತ್, ಭೂ ಸುಧಾರಣಾ, ಎಪಿಎಂಸಿ, ಕಾರ್ಮಿಕ ಕಾಯ್ದೆ ಸೇರಿ ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ಒಂದು ವರ್ಷದಿಂದಲೂ ನಡೆಯುತ್ತಿರುವ ಹೋರಾಟಕ್ಕೆ ಸ್ಪಂದಿಸಿ ಪ್ರಧಾನಮಂತ್ರಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಅಂಗೀಕಾರ ನೀಡಿದ ಸಂಸತ್ತಿನಲ್ಲಿಯೇ ಪ್ರಸ್ತಾಪಿಸಿ, ಸಂವಿಧಾನಿಕವಾಗಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

    ರಾಜ್ಯ ಸರ್ಕಾರವು ಇತರ ರಾಜ್ಯಗಳಿಗಿಂತಲೂ ಮೊದಲೇ ಕರ್ನಾಟಕದಲ್ಲಿ ಭೂ ಸುಧಾರಣೆ, ಕೃಷಿ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಯನ್ನು ಜಾರಿಗೆ ತಂದಿದೆ. ಆದರೆ, ಇದನ್ನು ತಕ್ಷಣ ಇಲ್ಲವೇ ಬೆಳಗಾವಿ ಅಧಿವೇಶನದಲ್ಲಿ ಹಿಂಪಡೆಯಲಾಗುತ್ತದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು. ಆದರೆ, ಮುಖ್ಯಮಂತ್ರಿ ಮಾತನಾಡದೇ ಇದ್ದರೆ ಹೇಗೆ? ಎಂದು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದರು.

    ಕಾರ್ಯಾಧ್ಯಕ್ಷ ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ (ಪುಟ್ಟಣ್ಣಯ್ಯ ಬಣ) ವೆಂಕಟಸ್ವಾಮಿ, ಸಿಐಟಿಯು ಕಾರ್ಯದರ್ಶಿ ಜಿ.ಸಿದ್ದಗಂಗಪ್ಪ, ಪ್ರಜಾ ಸಂಘರ್ಷ ಸಮಿತಿ ಸಂಚಾಲಕ ಚನ್ನರಾಯಪ್ಪ, ಕನ್ನಡ ಸೇನೆ ಅಧ್ಯಕ್ಷ ವಿ.ರವಿಕುಮಾರ್, ಕರವೇ ಅಧ್ಯಕ್ಷ (ಯುವಸೇನೆ) ರಾಮೇಗೌಡ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts