More

    ಕೆಲಸ ಕೊಡಿಸಲು ಕಾಯಕ ಬಂಧುಗಳು ಶ್ರಮಿಸಲಿ

    ಕನಕಗಿರಿ: ನರೇಗಾ ಯೋಜನೆಯ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ಚಿಕ್ಕಡಂಕನಕಲ್ ಗ್ರಾಪಂ ಪಿಡಿಒ ಹನುಮಂತಪ್ಪ ಹೇಳಿದರು.

    ತಾಲೂಕಿನ ಚಿಕ್ಕಡಂಕನಕಲ್ ಗ್ರಾಪಂ ಆವರಣದಲ್ಲಿ 2024-25ನೇ ಸಾಲಿನ ನರೇಗಾ ಕ್ರಿಯಾ ಯೋಜನೆ ತಯಾರಿಸಲು ಕರೆಯಲಾಗಿದ್ದ ಗ್ರಾಮಸಭೆಯಲ್ಲಿ ಗುರುವಾರ ಮಾತನಾಡಿದರು.

    ಗ್ರಾಮಸ್ಥರು ನರೇಗಾ ಯೋಜನೆ ಮೂಲಕ ಹಲವಾರು ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿ ಕೈಗೊಳ್ಳಬಹುದಾಗಿದೆ. ಪಂಚಾಯಿತಿಯ ಚುನಾಯಿತ ಜನಪ್ರತಿನಿಧಿಗಳು ಜನರ ಆಶೋತ್ತರಗಳಿಗೆ ಸ್ಪಂದಿಸಿ ಗ್ರಾಮೀಣಾಭಿವೃದ್ಧಿ ಕನಸನ್ನು ನನಸಾಗಿಸಬೇಕು ಎಂದರು.

    ತಾಂತ್ರಿಕ ಸಂಯೋಜಕ ಸೈಯದ್ ತನ್ವೀರ್ ಮಾತನಾಡಿ, ನರೇಗಾ ಕೆಲಸ ಮಾಡುವ ಕಾಯಕ ಬಂಧುಗಳು ಕೂಲಿಕಾರರಿಗೆ 100 ದಿನಗಳ ಕೆಲಸ ಕೊಡಿಸುವಲ್ಲಿ ಶ್ರಮಿಸಬೇಕು. ಕಾಲ ಕಾಲಕ್ಕೆ ನಮೂನೆ 06ನ್ನು ಗ್ರಾಮ ಪಂಚಾಯಿತಿಗೆ ತುಂಬಿ ಕೊಡಬೇಕು.

    ಬದು ನಿರ್ಮಾಣ, ಕೃಷಿ ಹೊಂಡ, ದನದ ದೊಡ್ಡಿ, ಮೇಕೆ ಶೆಡ್, ಹಂದಿ ಶೆಡ್, ಕೋಳಿ ಶೆಡ್ ನಿರ್ಮಾಣ, ತೋಟಗಾರಿಕೆ ಬೆಳೆಗಳು, ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆಯಿಂದ ಕಾಮಗಾರಿ ಕೈಗೊಳ್ಳಲು ಅವಕಾಶವಿದ್ದು ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

    ಸಭೆಯಲ್ಲಿ ಸ್ವೀಕೃತವಾದ 5 ಅರ್ಜಿಗಳನ್ನು ಓದಿ ಹೇಳಲಾಯಿತು. ಗ್ರಾಪಂ ಅಧ್ಯಕ್ಷೆ ನೀಲಮ್ಮ, ಸದಸ್ಯರಾದ ವಿರೂಪಾಕ್ಷಪ್ಪ, ಐಇಸಿ ಸಂಯೋಜಕ ಶಿವಕುಮಾರ್ ಕೆ, ತಾಂತ್ರಿಕ ಸಹಾಯಕ ಕೊಟ್ರೇಶ್ ಜವಳಿ ಹಾಗೂ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts