ದೇವಾಲಯದಿಂದ ಹಿಂದಿರುಗುವಾಗ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಶಿಡ್ಲಘಟ್ಟದ ಮೂವರ ಸಾವು

ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಶುಕ್ರವಾರ ನಡೆದಿದೆ.

ತರೀಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿರುವ ಶಿವಪುರದ ಢಾಬಾ ಸಮೀಪ ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮುನಿರಾಜು(65), ಜ್ಯೋತಿ(14) ಹಾಗೂ ಸುಬ್ಬಲಕ್ಷ್ಮಿ (60) ಎಂಬುವರು ಮೃತಪಟ್ಟಿದ್ದು, ಮೃತರೆಲ್ಲರೂ ಸಿಗಂದೂರು ದೇವಾಲಯದಿಂದ ಶಿಡ್ಲಘಟ್ಟಕ್ಕೆ ಹೋಗುವಾಗ ಅಪಘಾತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರುಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ನಡೆಯುತ್ತಿದ್ದಂತೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬೀರೂರು ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *