ಮಂಜುನಾಥನ ದರ್ಶನ ಪಡೆದ ಹಿಂದಿರುಗುವಾಗ ದುರ್ಘಟನೆ: ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಚಿಕ್ಕಗಳೂರು ತಾಲೂಕಿನ ಉದ್ದೇಬೋರನಹಳ್ಳಿ ಬಳಿ ತಡರಾತ್ರಿ ನಡೆದಿದೆ.

ಮಹೇಶ್, ನಾಗರಾಜ್ ಮತ್ತು ಸುರೇಶ ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಧರ್ಮಸ್ಥಳಲ್ಲಿ ಮಂಜುನಾಥ ದರ್ಶನ ಪಡೆದು ಬಳ್ಳಾರಿಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಕಡೂರು ತಾಲೂಕಿನ ಸಖರಾಯ ಪಟ್ಟಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *