26.8 C
Bangalore
Friday, December 13, 2019

ವಿಳಂಬ ಮಾಡಿದರೆ ತಪ್ಪಿಸಿಕೊಳ್ಳುವ ಸಾಧ್ಯತೆ ಹಿನ್ನೆಲೆ ಅಪರಾಧಗಳ ತನಿಖೆಗೆ ಪ್ರಾಮುಖ್ಯತೆ ಕೊಡಿ

Latest News

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ: ಈಕೆಯ ದಿಟ್ಟತನಕ್ಕೆ ನೆಟ್ಟಿಗರ ಶಹಬ್ಬಾಸ್​ ಗಿರಿ!

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ...

ಚಿಕ್ಕಮಗಳೂರು: ಅಪರಾಧ ಪ್ರಕರಣಗಳ ಸಂಖ್ಯೆ ಜಿಲೆಯಲ್ಲಿ ಸ್ಥಿರವಾಗಿದ್ದು, ಹಿಂದುಳಿದಿರುವ ತನಿಖೆ ಪ್ರಕ್ರಿಯೆ ಚುರುಕುಗೊಳಿಸಬೇಕೆಂದು ಅಪರಾಧ ಮತ್ತು ತಾಂತ್ರಿಕ ಸೇವೆಗಳ ಎಡಿಜಿಪಿ ಎಸ್.ಪರಶಿವಮೂರ್ತಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಡಿವೈಎಸ್ಪಿ, ಸಿಪಿಐ ಹಾಗೂ ಪಿಎಸ್​ಐಗಳ ಜತೆ ಜಿಲ್ಲೆಯ ಅಪರಾಧ ಪ್ರಕರಣಗಳ ಕುರಿತು ಸಭೆ ನಡೆಸಿ, ಅಪರಾಧ ಪ್ರಕರಣ ಪತ್ತೆ ಹಚ್ಚುವಷ್ಟೇ ಪ್ರಾಮುಖ್ಯತೆ ತನಿಖೆಗೂ ನೀಡಬೇಕು. ಜಿಲ್ಲೆಯಲ್ಲಿ ಅಪರಾಧ ಸಂಖ್ಯೆ ಹೆಚ್ಚಳವಾಗದೆ, ಸ್ಥಿರವಾಗಿದೆ. ಆದರೆ ನಡೆದಿರುವ ಅಪರಾಧಗಳ ತನಿಖೆ ಮಾತ್ರ ವಿಳಂಬವಾಗುತ್ತಿದೆ. ಕಾನೂನು ಸುವ್ಯವಸ್ಥೆ ಪಾಲನೆ ಜತೆಗೆ ಪ್ರಕರಣಗಳ ತನಿಖೆಗೂ ಸಮಯ ಮೀಸಲಿಡಬೇಕು ಎಂದು ಸಲಹೆ ನೀಡಿದರು.

ತನಿಖೆ ವಿಳಂಬವಾದಷ್ಟು ಪ್ರಕರಣದ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಬೇಕಾದ ಸಾಕ್ಷ್ಯಳ ಸಂಗ್ರಹ ಮಾಡುವ ಸಾಧ್ಯತೆಯೂ ಕಡಿಮೆಯಾಗುತ್ತದೆ. ಇದು ಅಪರಾಧಿಗಳು ಕಾನೂನು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ದಾರಿಯಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

ಡಿಜಿಟಲ್ ಯುಗದಲ್ಲಿ ಉನ್ನತ ತಂತ್ರಜ್ಞಾನ ಬಳಸಿಕೊಂಡು ಸಾಕಷ್ಟು ಅಪರಾಧ ನಡೆಯುತ್ತಿವೆ. ಇವುಗಳನ್ನು ತಡೆಯಬೇಕಾದರೆ ಮೊದಲು ಪೊಲೀಸರು ಈ ಬಗ್ಗೆ ಸರಿಯಾದ ಜ್ಞಾನ ಹೊಂದಿರಬೇಕು. ಪೇದೆಗಳು ಸೇರಿ ಇಲಾಖೆಯ ಎಲ ಹಂತದ ಅಧಿಕಾರಿಗಳು ತಂತ್ರಜ್ಞಾನದ ಅರಿವು ಬೆಳೆಸಿಕೊಳ್ಳಬೇಕು. ಮುಗ್ಧ ಜನರು ಸೈಬರ್ ಅಪರಾಧಗಳಿಂದ ಹಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ ಅವರಿಗೆ ಸೂಚಿಸಿದರು.

ಇಪ್ಪತ್ತು ವರ್ಷದ ಹಿಂದಿನ ಅಪರಾಧ ಪ್ರಕರಣಕ್ಕೂ ಹಾಗೂ ಈಗಿನದಕ್ಕೂ ಸಾಕಷ್ಟು ವ್ಯತ್ಯಾಸವಿರುತ್ತದೆ. ಪೊಲೀಸರ ತನಿಖೆ ಹಾದಿ ತಪ್ಪಿಸಲು ಅಪರಾಧಿಗಳು ಸಾಕಷ್ಟು ಪ್ರಯತ್ನ ಮಾಡಿರುತ್ತಾರೆ. ಇಂಥ ಸಂದರ್ಭ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಪೊಲೀಸರೂ ಪಾಲಿಸಬೇಕು ನಿಯಮ: ಅಪರಾಧ ಮತ್ತು ಅಪಘಾತಗಳ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಜಾರಿ ಮಾಡಿರುವ ನೂತನ ಸಂಚಾರ ನಿಯಮಗಳನ್ನು ಪೊಲೀಸರು ಮೊದಲು ಪಾಲಿಸಬೇಕು ಎಂದು ಎಸ್.ಪರಶಿವಮೂರ್ತಿ ಹೇಳಿದರು. ಇಲಾಖೆ ವಾಹನ ಚಲಾಯಿಸುವ ಚಾಲಕರು ಹಾಗೂ ಮುಂಭಾಗ ಕುಳಿತ ಯಾವುದೇ ಅಧಿಕಾರಿಗಳು ಸೀಟ್​ಬೆಲ್ಟ್ ಹಾಕಬೇಕು. ಒಂದು ವೇಳೆ ಧರಿಸದಿದ್ದರೆ ಇವರಿಗೂ ದಂಡ ಹಾಕಲೇಬೇಕು. ಪೊಲೀಸರೇ ನಿಯಮ ಪಾಲಿಸದಿದ್ದರೆ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗುತ್ತದೆ. ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಲೇಬೇಕು ಎಂದರು.</

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....