ಭಾನುವಾರ ಬೆಂಗಳೂರಿನಲ್ಲಿ ಚಿಕ್ಕೇನುಕೊಪ್ಪದ ಶ್ರೀಚನ್ನವೀರ ಶರಣರ 30ನೇ ಪುಣ್ಯಸ್ಮರಣೋತ್ಸವ

chikken
Published on

ಬೆಂಗಳೂರು: ಘನಮೌನಿ, ತ್ರಿಕಾಲ ಜ್ಞಾನಿ ಚಿಕ್ಕೇನುಕೊಪ್ಪದ ಶ್ರೀ ಚನ್ನವೀರ ಶರಣರ 30ನೇ ಸ್ಮರಣೋತ್ಸವ ಭಾನುವಾರ ಹಮ್ಮಿಕೊಳ್ಳಲಾಗಿದೆ.

ಆನಂದರಾವ್ ವೃತ್ತದಲ್ಲಿರುವ ಶ್ರೀಜಗದ್ಗುರು ರೇಣುಕಾಚಾರ್ಯ ಕಾಲೇಜಿನ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಬಳಗಾನೂರಿನ ಶ್ರೀಶಿವಶಾಂತವೀರ ಶರಣರು ವಹಿಸಲಿದ್ದಾರೆ. ಹೈಕೋರ್ಟಿನ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಾನಪದ ವಿದ್ವಾಂಸ ಡಾ.ಶಂಭು ಬಳೀಗಾರ್ ಉಪನ್ಯಾಸ ನೀಡಲಿದ್ದಾರೆ. ಅರುಣಕುಮಾರ್ ಮತ್ತು ತಂಡದವರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರಾದ ವಿಜಯಕುಮಾರ್ ಮರಿಯಪ್ಪ ಭತ್ತದ ಅವರಿಗೆ ಗೌರವ ಸನ್ಮಾನ ಹಮ್ಮಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net