More

    ಚಿಕ್ಕೋಡಿ ಜಿಲ್ಲೆಗಾಗಿ ಪ್ರಾಣತ್ಯಾಗ ಮಾಡಲೂ ಸಿದ್ಧ

    ಚಿಕ್ಕೋಡಿ: ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡದೆ ಹೋದರೆ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಪ್ರಾಣ ತ್ಯಾಗಕ್ಕೂ ಸಿದ್ಧ ಎಂದು ಸರ್ಕಾರಕ್ಕೆ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಎಚ್ಚರಿಕೆ ನೀಡಿದ್ದಾರೆ.

    ಗುರುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ಜಿಲ್ಲೆಯನ್ನು ರಚನೆ ಮಾಡುವಂತೆ ಈ ಭಾಗದ ಜನರು ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ, ಜಿಲ್ಲೆಯ ಜನಪ್ರತಿನಿಧಿಗಳು, ಸರ್ಕಾರ ಆಸಕ್ತಿ ತೋರಿಸುತ್ತಿಲ್ಲ. ಡಿಸೆಂಬರ್ ಒಳಗಾಗಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡದಿದ್ದರೆ ಜನಪ್ರತಿನಿಧಿಗಳ ಮನೆ ಮುಂದೆ, ರಸ್ತೆ, ರೈಲ್ವೆ ತಡೆದು ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದರು.

    ಕಳೆದ ಲೋಕಸಭಾ ಚುನಾವಣೆಯಲ್ಲಿ ಜನಪ್ರತಿನಿಧಿಗಳು ಆಯ್ಕೆ ಮಾಡಿದಲ್ಲಿ ಚಿಕ್ಕೋಡಿ ಜಿಲ್ಲೆಯನ್ನಾಗಿ ಮಾಡಲಾಗುವದು ಎಂದು ಚುನಾವಣೆ ಪ್ರಚಾರದಲ್ಲಿ ಕ್ಷೇತ್ರದ ಜನತೆಗೆ ಮಾತು ಕೊಟ್ಟಿದ್ದರು.ಆದರೆ ಇಲ್ಲಿವರೆಗೆ ಚಿಕ್ಕೋಡಿ ಜಿಲ್ಲೆಯನ್ನಾಗಿ ಮಾಡಲು ಯಾವುದೇ ಆಸಕ್ತಿ ತೋರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಎಸ್.ವೈ.ಹಂಜಿ, ಎಂ.ಎ.ಪಾಟೀಲ, ಬಿ.ಎ.ಪಾಟೀಲ, ಸುರೇಶ ಬ್ಯಾಕೂಡೆ, ತುಕಾರಾಮ ಕೋಳಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts