ಚಿಕ್ಕೋಡಿ ಬಳಿ ಹೆದ್ದಾರಿಯಲ್ಲಿ ಉರುಳಿ ಬಿದ್ದು ಉರಿದ ಬೈಕ್

ಚಿಕ್ಕೋಡಿ: ಪಟ್ಟಣದ ವಿದ್ಯಾನಗರ ಬಳಿ ಶುಕ್ರವಾರ ಬೆಳಿಗ್ಗೆ ವೇಗವಾಗಿ ಚಲಿಸುತ್ತಿದ್ದ ಬೈಕ್ ಉರುಳಿ ಬೆಂಕಿ ಹೊತ್ತಿಕೊಂಡು ಉರಿದಿದೆ.

ಚಿಕ್ಕೋಡಿ ಪಟ್ಟಣದ ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿ ಮಾರ್ಗದ ವಿದ್ಯಾನಗರದ ಹತ್ತಿರ ನಡೆದ ಈ ದುರ್ಘಟನೆಯಲ್ಲಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಚಿಕ್ಕೋಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.