ಚಿಕ್ಕೋಡಿ: ಮಾ.4ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಚಿಕ್ಕೋಡಿ: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಹೆಚ್ಚಿನ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಮಾ.4 ರಂದು ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಅಲ್ಪಸಂಖ್ಯಾತರ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಸಲೀಂ ಖತೀಬ್ ಹೇಳಿದ್ದಾರೆ.

ಬುಧವಾರ ಸ್ಥಳೀಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಆಯಾ ಜಿಲ್ಲೆಯ ಜಿಲ್ಲಾಧ್ಯಕ್ಷರು ತಮ್ಮ ಭಾಗದ ಅಲ್ಪಸಂಖ್ಯಾತರ ಘಟಕಗಳ ಪದಾಧಿಕಾರಿಗಳು, ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಪೂರ್ವಭಾವಿ ಸಭೆ ನಡೆಸಬೇಕು ಎಂದರು.

ಅಲ್ಪಸಂಖ್ಯಾತ ಘಟಕದ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಗುಲಾಬಹುಸೇನ ಬಾಗವಾನ್, ಎಸ್.ಬಿ.ಜಮಾದಾರ್, ಶಾನವಾಜ್ ಮುಲ್ಲಾ, ಸತ್ತಾರ ಮುಲ್ಲಾ, ಜಿನಗೌಡಾ ಇಮಗೌಡನವರ, ಇರ್ಫಾನ್ ಮುಲಾ,್ಲ ಅಂಜುಮನ್ ಕಮಿಟಿ ಇಸಾ ನಾಯಕವಾಡಿ, ಇತರರು ಇದ್ದರು.