ಚಿಕ್ಕಮಗಳೂರಿನಲ್ಲಿ ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ

ಚಿಕ್ಕಮಗಳೂರು:  ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥರಾದವರು ಕಡೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯ ಶುಭಕಾರ್ಯ ಮುಗಿಸಿ ಸಂಜೆ ಸಂಬಂಧಿಕರಿಗಾಗಿ ಬಿರಿಯಾನಿ ತಯಾರಿಸಲಾಗಿತ್ತು. ಬಿರಿಯಾನಿ ಸೇವಿಸಿದವರಿಗೆ ಭೇದಿ, ವಾಂತಿ ಕಾಣಿಸಿಕೊಂಡಿದ್ದು 17 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನ ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಮೂರು ಕೊಠಡಿಗಳಲ್ಲಿ ಅಸ್ವಸ್ಥರನ್ನು ದಾಖಲಿಸಲಾಗಿದೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಅಸ್ವಸ್ಥರಲ್ಲಿ ಒಂಬತ್ತು ಮಂದಿ ಮಹಿಳೆಯರಿದ್ದಾರೆ. … Continue reading ಚಿಕ್ಕಮಗಳೂರಿನಲ್ಲಿ ಬಿರಿಯಾನಿ ಸೇವಿಸಿ 17 ಮಂದಿ ಅಸ್ವಸ್ಥ