More

  ಬಿಕಾಂ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣದ ಮಹತ್ವದ ತೀರ್ಪು ನಾಳೆ

  ಚಿಕ್ಕಮಗಳೂರು : ಬಿಕಾಂ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದ ವಿಚಾರಣೆ ಅಂತ್ಯಗೊಳಿಸಿರುವ ಜೆಎಂಎಫ್ ಸಿ ಕೋರ್ಟ್​ ನಾಳೆ ಮಹತ್ವದ ತೀರ್ಪು ನೀಡಲಿದೆ.

  ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದಲ್ಲಿ 2016ರಲ್ಲಿ ಬಿಕಾಂ ವಿದ್ಯಾರ್ಥಿನಿಯನ್ನು ಆರೋಪಿಗಳಾದ ಪ್ರದೀಪ್​ ಹಾಗೂ ಸಂತೋಷ್​ ಎಂಬ ಯುವಕರು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂಬ ದೂರು ದಾಖಲಾಗಿತ್ತು.
  ಕೋರ್ಟ್​ಗೆ ಪೊಲೀಸರು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಕೋರ್ಟ್​ ನಡೆಸಿ ತೀರ್ಪು ಕಾಯ್ದಿರಿಸಿದೆ.

  ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಈ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. (ದಿಗ್ವಿಜಯ ನ್ಯೂಸ್​)

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts