18 C
Bangalore
Friday, December 6, 2019

ಪಶ್ಚಿಮಘಟ್ಟಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಗೆ ಶಾಸನ ಬದ್ಧತೆ ಒದಗಿಸಲು ಬದ್ದ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಚಿಕ್ಕಮಗಳೂರು: ಅತ್ಯಂತ ಪರಿಸರ ಸೂಕ್ಷ್ಮವಲಯವಾಗಿರುವ ಪಶ್ಚಿಮಘಟ್ಟಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಿ ಅದಕ್ಕೆ ಶಾಸನಬದ್ಧತೆ ಒದಗಿಸಲಾಗುವುದು ಎಂದು ಸಚಿವ ಸಿ.ಟಿ.ರವಿ ಭರವಸೆ ನೀಡಿದರು.

ಜಿಲ್ಲೆಯಲ್ಲಿ ವಿಷನ್-2023ರ ಅನ್ವಯ ಕೈಗೊಳ್ಳಬಹುದಾದ ಅಭಿವೃದ್ಧಿ ಯೋಜನೆಗಳ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಚಿಕ್ಕಮಗಳೂರಿನಿಂದ ಬೇಲೂರು ಮೂಲಕ ಹಾಸನ ಸಂರ್ಪಸುವ ರೈಲು ಮಾರ್ಗ ನಿರ್ವಿುಸಲು ಕೇಂದ್ರ ರೈಲ್ವೆ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಅವರೊಂದಿಗೆ ಮತ್ತೆ ಮಾತನಾಡಿ ಈ ಮಾರ್ಗ ನಿರ್ವಣಕ್ಕೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಂಬಂಧಿಸಿದಂತೆ ಸಮಗ್ರ ಯೋಜನೆ ರೂಪಿಸಲಾಗುವುದು. ಈ ಇಲಾಖೆಗೆ ಸರ್ಕಾರ ನೀಡಿರುವ ಹಣದಲ್ಲಿ ಹಿಂದಿನ ಬಾಕಿ ನೀಡಿ ಉಳಿದಿರುವುದು 67 ಕೋಟಿ ರೂ. ಮಾತ್ರ. ಆದರೂ ಸಮಗ್ರ ಯೋಜನೆ ರೂಪಿಸಿ ಆರ್ಥಿಕ ಇಲಾಖೆಗೆ ನೀಡಿ ಹೆಚ್ಚಿನ ಅನುದಾನ ಸಿಗುವಂತೆ ಮಾಡುವುದಾಗಿ ತಿಳಿಸಿದರು.

ಬಯಲುಸೀಮೆಯ ದೇವನೂರು ಭಾಗದಲ್ಲಿ ಕೈಗಾರಿಕಾ ವಲಯ ನಿರ್ವಣಕ್ಕೆ 35 ಎಕರೆ ಜಾಗ ಪಡೆದು ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರಿಸಿ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕರಗಡ ನೀರಾವರಿ ಯೋಜನೆಯಲ್ಲಿ ಕಳಸಾಪುರ ಕೆರೆಗೆ ನೀರು ಹರಿಸುತ್ತಿದ್ದು ಕೆರೆ ತುಂಬುವ ಹಂತ ತಲುಪಿದೆ. ತಾಂತ್ರಿಕ ತಂಡವೊಂದು ಬಂದು ಪೈಪ್​ಲೈನ್ ಮೂಲಕ ನೀರನ್ನು ಕೊಂಡೊಯ್ಯಬೇಕೋ ಅಥವಾ ಕಾಲುವೆಗೆ ಕಾಂಕ್ರೀಟ್ ಲೈನಿಂಗ್ ಮಾಡಿದರೆ ಉತ್ತಮವೊ ಎಂಬುದನ್ನು ಪರಿಶೀಲಿಸಿ ಸದ್ಯದಲ್ಲೇ ವರದಿ ನೀಡಲಿದೆ ಎಂದರು. ಸೆ.19 ರಂದು 619 ಕೋಟಿ ರೂ. ಕುಡಿಯುವ ನೀರಿನ ಯೋಜನೆ ರೂಪಿಸಲು ಸಭೆ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಪರಿಸರ ಹಾಳಾಗದಂತೆ ಅಭಿವೃದ್ಧಿಗೊಳಿಸಿ: ಉದ್ಯೋಗ ಒದಗಿಸಲು ಕೈಗಾರಿಕೆಗಳ ಆರಂಭ, ವೃತ್ತಿ ಆಧಾರಿತ ತರಬೇತಿ ಕೇಂದ್ರ, ಪರಿಸರಕ್ಕೆ ಹಾನಿಯಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿ. ಹೀಗೆ ಜಿಲ್ಲೆಯಲ್ಲಿ ವಿಷನ್-2023ರ ಸಭೆಯಲ್ಲಿ ಕೇಳಿ ಬಂದ ಸಾರ್ವಜನಿಕ ಸಲಹೆಗಳಿವು. ಉದ್ಯಮಿ ಡಿ.ಎಚ್.ನಟರಾಜ್ ಮಾತನಾಡಿ, ಜಿಲ್ಲೆಯಲ್ಲಿ ಯುವಕರು ಉದ್ಯೋಗ ದೊರೆಯದೆ ಬೃಹತ್ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಕೈಗಾರಿಕೆ ಆರಂಭಿಸಿ ಅವರಿಗೆ ಉದ್ಯೋಗ ಒದಗಿಸಬೇಕು. ವೃತ್ತಿ ಆಧಾರಿತ ತರಬೇತಿ ಕೇಂದ್ರ ಆರಂಭಿಸಬೇಕು. ಅಕ್ರಮವಾಗಿ ಬರುತ್ತಿರುವ ಕಾಳುಮೆಣಸಿಗೆ ತಡೆ ಹಾಕಬೇಕು ಎಂದು ಸಲಹೆ ನೀಡಿದರು.

ಬಿಎಸ್​ಪಿ ಮುಖಂಡ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಉಪ್ಪಳ್ಳಿಯಿಂದ ಬರುವ ಕಾಲುವೆ ಹಾಗೂ ಟಿಪ್ಪು ನಗರದ ಬಳಿ ಇರುವ ರಾಜಕಾಲುವೆಯನ್ನು ಉಳ್ಳವರೇ ಒತ್ತುವರಿ ಮಾಡಿ ಮನೆಗಳನ್ನು ನಿರ್ವಿುಸಿಕೊಂಡಿದ್ದಾರೆ. ಅವುಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದರು. ಪರಿಸರಕ್ಕೆ ಹಾನಿಯಾಗದಂತೆ ಪ್ರವಾಸೋದ್ಯಮ ಅಭಿವೃದ್ಧಿಗೊಳಿಸಬೇಕು. ಬಸವನಹಳ್ಳಿ ಮತ್ತು ಕೋಟೆಕೆರೆ, ರಾಮೇಶ್ವರ ಕೆರೆಗಳನ್ನು ಅಭಿವೃದ್ಧಿ ಮಾಡಿ ಅದಕ್ಕೆ ಕೊಳಚೆ ನೀರು ಸೇರದೆ ಇದ್ದಲ್ಲಿ ಅವುಗಳಿಂದಲೇ ಕುಡಿಯುವ ನೀರು ಒದಗಿಸಬಹುದು ಎಂದು ಹೇಳಿದರು.

ಕನ್ನಡ ಚಳವಳಿ ಕಾರ್ಯಕರ್ತ ಬಿ.ಎಂ.ಕುಮಾರ್ ಮಾತನಾಡಿ, ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆಯಾಗಿದೆ. ಪಾದಚಾರಿ ರಸ್ತೆಗಳಲ್ಲಿ ಸಂಜೆ ವೇಳೆ ಆಹಾರ ನೀಡುವ ಪದ್ಧತಿ ತೊಲಗಿಸಲು ಫುಡ್​ಕೋರ್ಟ್ ನಿರ್ಮಾಣ ಮಾಡಬೇಕೆಂದು ಹೇಳಿದರು.

ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ ಜೋಷಿ ಮಾತನಾಡಿ, ನಗರದ ಮುಖ್ಯರಸ್ತೆಗಳಲ್ಲಿರುವ ಪಾದಚಾರಿ ರಸ್ತೆಗಳ ಮೇಲೆ ಜನ ಓಡಾಡಲು ಸಾಧ್ಯವಾಗದಂತೆ ಅಂಗಡಿಗಳ ಜಾಹೀರಾತು ಫಲಕಗಳು ಎದುರಾಗುತ್ತಿವೆ. ಈ ಸಮಸ್ಯೆ ಬಗೆಹರಿಸುವ ಅಗತ್ಯವಿದೆ ಎಂದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...