More

    ರಾಜ್ಯ ಸರ್ಕಾರದಿಂದ ಮಧ್ಯಮ, ಸಣ್ಣ ವ್ಯಾಪಾರಸ್ಥರ ಕಡೆಗಣನೆ

    ಚಿಕ್ಕಮಗಳೂರು: ಹಲವು ಕಂಪನಿಗಳು ಸೇರಿ ಕೆಲವೇ ಜನರನ್ನು ಶ್ರೀಮಂತಗೊಳಿಸುವ ಉದ್ದೇಶದಿಂದ ಎಪಿಎಂಸಿ, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲು ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಜೆಡಿಎಸ್ ಮುಖಂಡ ಎಸ್.ಎಲ್.ಧಮೇಗೌಡ ಹೇಳಿದರು.

    ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು.

    ವಿಧಾನಪರಿಷತ್ ಹಾಗೂ ವಿಧಾನಸಭೆಯಲ್ಲಿ ಚರ್ಚೆ ಮಾಡದೆ ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವುದು ರೈತರಿಗೆ ನೋವುಂಟುಮಾಡಿದೆ. ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಸ್ಥರನ್ನು ಕಡೆಗಣಿಸಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿ ಬಹಳಷ್ಟು ಚರ್ಚೆ ನಡೆಯಲಿದೆ. ನಂತರ ಪಕ್ಷ ಕರೆ ನೀಡುವ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳೋಣ ಎಂದರು.

    ನಗರಸಭೆ, ಗ್ರಾಪಂ ಚುನಾವಣೆಗಳು ಸಮೀಪಿಸುತ್ತಿವೆ. ಪಕ್ಷದ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಎದುರಿಸೋಣ. ಸೋಲು- ಗೆಲುವು ಜೆಡಿಎಸ್​ಗೆ ಹೊಸದೇನಲ್ಲ. ಹೋರಾಟ ಮಾಡಿಕೊಂಡೇ ಬಂದಿದ್ದೇವೆ. ಮುಂದಿನ ಬಾರಿ ರಾಜ್ಯದಲ್ಲಿ ಹೊಸ ಸರ್ಕಾರ ಬಂದೇ ಬರುತ್ತದೆ ಎಂದು ಹೇಳಿದರು.

    ಗ್ರಾಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚಾಗಿ ಗೆಲ್ಲುವಂತೆ ಸಿದ್ಧತೆ ಮಾಡಿಕೊಳ್ಳಬೇಕು. ಪದಾಧಿಕಾರಿಗಳನ್ನು ನೆಪಮಾತ್ರಕ್ಕೆ ಆಯ್ಕೆ ಮಾಡಿದರೆ ಪಕ್ಷ ನಿಂತ ನೀರಾಗುತ್ತದೆ. ರಾಜ್ಯದ ಯಾವುದೇ ಪದಾಧಿಕಾರಿ ಹುದ್ದೆಯೂ ಲೆಟರ್​ಹೆಡ್, ವಿಸಿಟಿಂಗ್ ಕಾರ್ಡ್​ಗೆ ಸೀಮಿತವಾಗಬಾರದು. ಯಾರು ಪಕ್ಷ ಸಂಘಟನೆಗೆ ಶ್ರಮಿಸುವುದಿಲ್ಲವೋ ಅವರನ್ನು ತೆಗೆದುಹಾಕಿ ಅನ್ಯರನ್ನು ಆಯ್ಕೆ ಮಾಡಬೇಕು ಎಂದು ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts