More

    ಚಿಕ್ಕೋಡಿ: ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯಿತಿ ಸದಸ್ಯತ್ವಕ್ಕೆ ರಾಜೀನಾಮೆ

    ಚಿಕ್ಕೋಡಿ: ರಾಜ್ಯದಲ್ಲಿ ಈ ಹಿಂದೆ ಭಾರೀ ಸದ್ದು ಮಾಡಿದ್ದ ಕಮಿಷನ್​ ಕಿರುಕುಳ ಪ್ರಕರಣ ಇದೀಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಗ್ರಾಮ ಪಂಚಾಯಿತಿ ಸದಸ್ಯೆ ಒಬ್ಬರು ಕಮಿಷನ್ ಕಿರುಕುಳಕ್ಕೆ ಬೇಸತ್ತು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

    ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಪಂಚಾಯಿತಿ ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಎಂಬುವರು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅವರ ಕ್ಷೇತ್ರದಲ್ಲಿ ಈ ಕಮಿಷನ್ ಕಿರುಕುಳ ಆರೋಪ ಕೇಳಿಬಂದಿದೆ.

    ಇದನ್ನೂ ಓದಿ: ಸಹೋದರ-ಸಹೋದರಿ ನಡುವಿನ ಲೈಂಗಿಕತೆ ಬಗ್ಗೆ ಪ್ರಶ್ನೆ: ಪಾಕ್​ ಯೂನಿವರ್ಸಿಟಿ ವಿರುದ್ಧ ಭುಗಿಲೆದ್ದ ಆಕ್ರೋಶ

    ಗ್ರಾಮದ ಅಭಿವೃದ್ಧಿ ಕೆಲಸಗಳಿಗಾಗಿ ಕಾಮಗಾರಿ ಅನುಮೋದನೆಗೆ ಪಂಚಾಯಿತಿ ಅಧಿಕಾರಿಗಳಿಂದ ಶೇ. 30 ಕಮಿಷನ್ ಬೇಡಿಕೆ ಇದೆ. ಆದರೆ, ಕಮಿಷನ್ ನೀಡಲು ನನ್ನ ಕೈಯಿಂದ ಸಾಧ್ಯವಾಗದೇ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಪಂಚಾಯತಿಯ 14 ಮತ್ತು 15ನೇ ಹಣಕಾಸು, ಉದ್ಯೋಗ ಖಾತ್ರಿ ಯೋಜನೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆಗೆ ಕಮಿಷನ್ ಬೇಡಿಕೆ ಇಡುತ್ತಿದ್ದಾರೆ. ಕ್ರಿಯಾಯೋಜನೆ ಅನುಮೋದನೆಗಾಗಿಯು ಮುಂಗಡವಾಗಿ ಶೇ. 3 ರಷ್ಟು ಹಣವನ್ನು ನೀಡಬೇಕಿದೆ. ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಮುಗಂಡ ಹಣ ನೀಡಲು ಪಿಡಿಓ ಮಂಜುನಾಥ್ ದಳವಾಯಿ ಅವರು ಕಮಿಷನ್ ಬೇಡಿಕೆ ಇಟ್ಟಿದ್ದಾರೆ ಎಂದು ದೂರಿದ್ದಾರೆ.

    ಇದನ್ನೂ ಓದಿ: ರಾಜ್ಯದಲ್ಲಿ ತ್ರಿಮೂರ್ತಿ ಸಂಚಲನ: ಮೋದಿ ಮ್ಯಾಜಿಕ್, ಷಾ ಕಾರ್ಯತಂತ್ರ, ನಡ್ಡಾ ಸಂಘಟನಾತ್ಮಕ ಗಮನ

    ಕಾಮಗಾರಿ ಬಳಿಕ‌ ಹಣದ ಬಿಲ್​​ಗಾಗಿ ಪಿಡಿಒಗೆ 10% ಇಂಜಿನೀಯರ್​ಗೆ 10% ತಾ.ಪಂ ಎಡಿ, ಎಒಗೆ 7% ಹಾಗೂ ಟೆಕ್ನಿಕಲ್​ಗೆ 3% ಸೇರಿ ಒಟ್ಟು 30% ಕಮಿಷನ್ ಬೇಡಿಕೆ ಇಡುತ್ತಿದ್ದಾರೆ. ಇಷ್ಟು ಕಮಿಷನ್​ ಕೊಡಲು ಸಾಧ್ಯವಿಲ್ಲ. ಅಲ್ಲದೆ, ಇಷ್ಟೊಂದು ಕಮಿಷನ್​ ನೀಡಿ ಉತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ನಡೆಸುವುದು ಕಠಿಣವಾಗಿದೆ. ಹೀಗಾಗಿ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಸಿದ್ದಪ್ಪ ರಾಜಂಗಳೆ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

    ಇಂದು BJP ಸೇರಲಿದ್ದಾರೆ ಹಿರಿಯ ನಟ ಅನಂತ್ ನಾಗ್

    ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ರಜೆ ನಿರಾಕರಣೆ: ರಾಜೀನಾಮೆಗೆ ಮುಂದಾದ ಎಸ್​ಐ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts