ಚಿಕ್ಕೋಡಿ: ಮಾಯಕ್ಕಾ ಜಾತ್ರೆಗೆ ವಿಶೇಷ ಬಸ್ ಸೌಲಭ್ಯ

ಚಿಕ್ಕೋಡಿ: ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿ ಜಾತ್ರೆಗೆ ಫೆ.19 ರಿಂದ ಮಾ.3 ರವರೆಗೆ ವಿಶೇಷ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೆ ಬಿಡಲಾಗುವುದು. ವಾ.ಕ.ರಸ್ತೆ ಸಾರಿಗೆ ಸಂಸ್ಥೆಯ ಚಿಕ್ಕೋಡಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಯಬಾಗ, ಅಥಣಿ, ಚಿಕ್ಕೋಡಿ, ಗೋಕಾಕ ಘಟಕಗಳಿಂದ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸಲಾಗುವುದು. ಪ್ರಯಾಣಿಕರು ಸುಖಕರ ಪ್ರಯಾಣಕ್ಕೆ ಸಾರಿಗೆ ಇಲಾಖೆಯ ಸದುಪಯೋಗಪಡೆದುಕೊಳ್ಳುವಂತೆ ಕೋರಿದ್ದಾರೆ. ಜಾತ್ರಾ ಕೇಂದ್ರಗಳಲ್ಲಿ ನುರಿತ ಸಿಬ್ಬಂದಿ ನೇಮಕ ಮಾಡಲಾಗಿದೆ. ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದ್ದು ಸಾರ್ವಜನಿಕರು ಬಸ್ ಸೌಲಭ್ಯ ಪಡೆದುಕೊಳ್ಳಬೇಕು ಎಂದು ವಾ.ಕ.ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.