More

    ಮಕ್ಕಳ ಮೇಲಿನ ದೌರ್ಜನ್ಯ ಕಳವಳಕಾರಿ

    ನರಗುಂದ: ಮಕ್ಕಳು ಸಮಾಜದ ಆಸ್ತಿ. ಅವರ ಹಕ್ಕುಗಳನ್ನು ಪ್ರತಿಯೊಬ್ಬರೂ ರಕ್ಷಣೆ ಮಾಡಬೇಕು ಎಂದು ಜೆಎಂಎಫ್‌ಸಿ ದಿವಾಣಿ ನ್ಯಾಯಾಧೀಶೆ ಗಾಯತ್ರಿ ಎಚ್.ಡಿ. ಹೇಳಿದರು.

    ತಾಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕನರಗುಂದದ ಸರ್ಕಾರಿ ಪದವಿಪೂರ್ವ ಕಾಲೇಜ್ ಹಾಗೂ ಡಿ.ಎಸ್. ಕೆಂಚನಗೌಡ್ರ ಸರ್ಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಪೋಕ್ಸೋ ಕಾಯ್ದೆ ಕುರಿತ ಕಾನೂನು ಅರಿವು- ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ದೇಶ ಅಭಿವೃದ್ಧಿ ಹೊಂದುತ್ತಿದ್ದರೂ ಸಮಾಜದಲ್ಲಿ ಮಕ್ಕಳಿಗೆ ಭದ್ರತೆ ಇದೆಯೇ ಎಂಬುದು ಬಹುತೇಕರ ಪ್ರಶ್ನೆಯಾಗಿದೆ. ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ ಜರುಗುತ್ತಿರುವುದು ಕಳವಳಕಾರಿಯಾಗಿದೆ. ಪಾಲಕರು, ಶಿಕ್ಷಕರು ಮಕ್ಕಳ ರಕ್ಷಣೆಗಾಗಿ ಇರುವ ಕಾಯ್ದೆಗಳ ಬಗ್ಗೆ ತಿಳಿಯಬೇಕು. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಅಪರಾಧಿಗೆ ಕನಿಷ್ಠ 10 ವರ್ಷ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದು ಎಂದರು.

    ಶಾಲಾ ಮುಖ್ಯೋಪಾಧ್ಯಾಯಿನಿ ಆರ್.ವಿ. ಕುರ್ತಕೋಟಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಪುಸ್ತಕ ಹಿಡಿಯುವ ಬದಲು ಅತಿಯಾಗಿ ಮೊಬೈಲ್ ಬಳಸುವುದರಿಂದಲೇ ಪೋಕ್ಸೋ ಹಾಗೂ ಇನ್ನಿತರ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ನಿರಂತರ ಅಭ್ಯಾಸದೊಂದಿಗೆ ಆರೋಗ್ಯಕರ ಬದುಕಿಗೆ ಉತ್ತಮ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ಶಿಶು ಯೋಜನಾಧಿಕಾರಿ ಕಮಲಾ ಹುಲಕೋಟಿ, ಪ್ರಾಚಾರ್ಯ ಎಸ್.ವಿ. ದಂಡಾನಾಯ್ಕ, ಎಸ್.ಎಸ್. ಹುಕ್ಕೇರಿ, ನ್ಯಾಯವಾದಿ ಎಸ್.ಆರ್. ಪಾಟೀಲ, ಎಂ.ಬಿ. ಕುಲಕರ್ಣಿ, ಎನ್.ಆರ್. ನಿಡಗುಂದಿ, ಎಸ್.ಟಿ. ಹಳೇಮನಿ, ಡಿ.ಎಸ್. ಖಾನನ್ನವರ, ಫಕೀರೇಶ ಅಂಗಡಿ, ಅನ್ನಪೂರ್ಣಾ ತೇಲಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts