More

    ಹೊಟ್ಟೆನೋವು ಎಂದರೂ ಲೆಕ್ಕಿಸದ ವೈದ್ಯರು: ಹೆರಿಗೆ ವೇಳೆ ಮಗು ಸಾವು; ಆಸ್ಪತ್ರೆ ಮುಂದೆ ಪ್ರತಿಭಟನೆ

    ಕುಂದಾಪುರ: ರಕ್ತಸ್ರಾವ ಇದೆ, ಹೊಟ್ಟೆನೋವು ಎಂದರೂ ವೈದ್ಯರು ಲೆಕ್ಕಿಸದ್ದರಿಂದ ಹೆರಿಗೆ ವೇಳೆ ಮಗು ಸಾವಿಗೀಡಾಗಿದೆ ಎಂದು ಆರೋಪಿಸಿ ಆಸ್ಪತ್ರೆ ಮುಂದೆ ಭಾರಿ ಪ್ರತಿಭಟನೆ ನಡೆಸಿದ ಪ್ರಕರಣವೊಂದು ನಡೆದಿದೆ.

    ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮಹಿಳೆಗೆ ಹೆರಿಗೆಯಾಗುವಾಗ ಮಗು ಮೃತಪಟ್ಟ ಪ್ರಕರಣದಲ್ಲಿ ಸೋಮವಾರ ಸಂಜೆ ಇಲ್ಲಿನ ಸರ್ಕಾರಿ ಆಸ್ಪತ್ರೆ ಎದುರು ಸಾರ್ವಜನಿಕರು ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

    ನ.17ರಂದು ರಾತ್ರಿ 10.30ರ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರೆ ದಾವನಮನೆ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಜ್ಯೋತಿ ಖಾರ್ವಿ ಹೆರಿಗೆ ನೋವಿನಿಂದ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿ ಮಗು ಮೃತಪಟ್ಟಿದೆ ಎಂದು ಹೇಳಿದ್ದಾರೆ.

    ಇದು ವೈದ್ಯರ ನಿರ್ಲಕ್ಷ್ಯದಿಂದ ಆದ ಸಾವು ಎಂದು ಊರವರು ಹಾಗೂ ಮನೆಯವರು ಪ್ರತಿಭಟನೆ ನಡೆಸಿದರು. ವೈದ್ಯರ ಅಮಾನತು ಮಾಡಬೇಕು, ತನಿಖೆ ನಡೆಸಬೇಕು, ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು, ಸ್ಥಳಕ್ಕೆ ಡಿಸಿ, ಜಿಲ್ಲಾ ಆರೋಗ್ಯಾಧಿಕಾರಿ ಬರಬೇಕು ಎಂದು ಒತ್ತಾಯಿಸಿದರು.

    ಇದನ್ನೂ ಓದಿ: ವಿಶ್ವಕಪ್​ ಕ್ರಿಕೆಟ್​ನಲ್ಲಿ ಭಾರತ ಸೋತಿದ್ದಕ್ಕೆ ಬೇಜಾರಾಗಿ ಸತ್ತ ಯುವಕ!

    ಮಗುವಿನ ಕುತ್ತಿಗೆಗೆ ಹೊಕ್ಕುಳಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಹೇಳುವ ಮನೆಯವರು, ಇಂತಹ ಸಾವು ನಾಲ್ಕರಲ್ಲಿ ಒಂದು ಸಂಭವಿಸುತ್ತಿರುತ್ತದೆ ಎಂದು ಉಡಾಫೆಯಿಂದ ಮಾತಾಡಿದ್ದಾಗಿ ಆರೋಪಿಸುತ್ತಾರೆ. ಅದೇ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡುತ್ತಾರೆ, ಅಲ್ಲಿ ಸಾವಿನ ಪ್ರಮಾಣ ಇದೇ ರೀತಿ ಇರುತ್ತದೆಯೇ ಎಂದು ಕೇಳಿದರು.

    ರಕ್ತಸ್ರಾವ ಇದೆ, ಹೊಟ್ಟೆ ನೋವು ಇದೆ ಎಂದರೂ ವೈದ್ಯರು ಗಣನೆಗೆ ತೆಗೆದುಕೊಳ್ಳಲಿಲ್ಲ. ಸ್ಕ್ಯಾನಿಂಗ್ ಮಾಡಿ, ಎಂಟೂವರೆ ತಿಂಗಳಿನಲ್ಲಿ ಸ್ಕ್ಯಾನಿಂಗ್ ಮಾಡದ ಕಾರಣ ಈಗ ಸ್ಕ್ಯಾನಿಂಗ್​ ಮಾಡಿ ಎಂದು ಮನೆಯವರು ಒತ್ತಾಯಿಸಿದರೂ ವೈದ್ಯರು ಮಾಡಿಸಲಿಲ್ಲ ಎಂದರು.

    ಉಪವಿಭಾಗ ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕ ವೈದ್ಯಾಧಿಕಾರಿ ಡಾ.‌ರಾಬರ್ಟ್ ರೆಬೆಲ್ಲೋ, ಸರ್ಕಾರಿ ಕರ್ತವ್ಯದ ವೇಳೆ ಖಾಸಗಿಯಲ್ಲಿ ಸೇವೆ ಸಲ್ಲಿಸುವಂತಿಲ್ಲ. ದೂರು ಬಂದಾಗ ನೋಟಿಸ್ ಕೂಡ ನೀಡಲಾಗಿದೆ. ಮನವಿ ಮೇಲಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರೂ ಪ್ರತಿಭಟನಕಾರರು ಸ್ಥಳ ಬಿಟ್ಟು ಕದಲಲಿಲ್ಲ. ಸರ್ಕಲ್ ಇನ್ಸ್‌ಪೆಕ್ಟರ್ ನಂದಕುಮಾರ್, ಎಸ್‌ಐ ಪ್ರಸಾದ್, ಸಂಚಾರ ಠಾಣೆ ಎಸ್‌ಐ ಸುಬ್ಬಣ್ಣ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿತ್ತು.

    ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿ ಆಗಬೇಕು: ವಿಶಿಷ್ಟ ರೀತಿಯಲ್ಲಿ ಅಭಿಮಾನ ಮೆರೆದ ವರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts