More

    ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧ

    ಯಾದಗಿರಿ: ಅಪಾಯಕಾರಿ ಉದ್ಯಮಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಡಿವೈಎಸ್ಪಿ ಯು. ಶರಣಪ್ಪ ತಿಳಿಸಿದರು.

    ಸೋಮವಾರ ಇಲ್ಲಿನ ಪೊಲೀಸ್ ಆಡಳಿತ ಭವನದಲ್ಲಿ ಸಿಪಿಐ, ಪಿಎಸ್ಐ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಬಾಲಕಾರ್ಮಿಕ ನಿಷೇಧ, ನಿಯಂತ್ರಣ ಕಾಯ್ದೆ ಹಾಗೂ ನಿಷೇಧಿತ ತಂಬಾಕು ಕುರಿತ ಮಾಹಿತಿ ಕಾಯರ್ಾಗಾರದಲ್ಲಿ ಮಾತನಾಡಿದ ಅವರು, 6ರಿಂದ 18 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಹಚ್ಚಕೂಡದು. ಸರ್ಕಾರ ಕಡ್ಡಾಯ ಶಿಕ್ಷಣ ನೀತಿ ಜಾರಿಗೆ ತಂದಿದ್ದು ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.

    ಬಾಲ ಕಾರ್ಮಿಕ ಸಂಘದ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ ಮಾತನಾಡಿ, ನಗರದಾದ್ಯಂತ ಅನಿರೀಕ್ಷಿತ ತಪಾಸಣೆ ಕೈಗೊಂಡು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಲು ಮಾಲೀಕರುಗಳಿಗೆ ಸೂಚಿಸಲಾಗುತ್ತಿದೆ. ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದಲ್ಲಿ ಮಾಲೀಕರುಗಳಿಗೆ ಪ್ರತಿ ಮಗುವಿಗೆ 50 ಸಾವಿರ ರೂ.ನಂತೆ ದಂಡ ವಿಧಿಸಲಾಗುತ್ತದೆ. ಜತೆಗೆ ಜೈಲು ಶಿಕ್ಷೆ ಕೂಡ ವಿಧಿಸಬಹುದಾಗಿದೆ ಎಂದು ತಿಳಿಸಿದರು.

    ಡಿವೈಎಸ್ಪಿ ವೆಂಕಟೇಶ್ ಮಾತನಾಡಿ, ಕೋಟ್ಪಾ-2003ರ ಕಾಯ್ದೆಯನ್ನು ಉಲ್ಲಂಘನೆ ಮಾಡುವ ಅಂಗಡಿ ಮಾಲೀಕರಿಗೆ ಹಗೂ ಸಾರ್ವಜನಿಕರಿಗೆ ಕಾನೂನು ಬಗ್ಗೆ ಅರಿವು ಮೂಡಿಸುತ್ತಾ ದಂಡ ವಿಧಿಸಬೇಕು ಎಂದು ಹೇಳಿದರು.

    ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ್ತಿ ಮಹಾಲಕ್ಷ್ಮೀ ಸಜ್ಜನ್ ಮಾತನಾಡಿ, ಕೋಟ್ಪಾ-2003 ಕಾಯ್ದೆಯಡಿಯಲ್ಲಿ ಸೆಕ್ಷನ್ 4, 5, 6, 6ಎ, 6ಬಿ ಮತ್ತು 7ರ ಪ್ರಕಾರ ಸಂಬಂಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ 100 ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬಂಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಿಸಬಹುದು ಎಂದು ತಿಳಿಸಿದರು.

    ಜಿಲ್ಲೆಯ ಎಲ್ಲ ಸರ್ಕಲ್ ಇನ್ಸ್ಪೆಕ್ಟರ್, ಪಿಎಸ್ಐ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts