More

    ಬಾಲ ಕಾರ್ಮಿಕರು, ಭಿಕ್ಷುಕರ ವಶ

    ಚಿಕ್ಕಮಗಳೂರು: ಭಿಕ್ಷಾಟನೆ ಮಾಡುತ್ತಿದ್ದ ಮತ್ತು ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದ ಮಕ್ಕಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ನಗರ ಸೇರಿ ಜಿಲ್ಲಾದ್ಯಂತ ಬುಧವಾರ ಕಾರ್ಯಾಚರಣೆ ನಡೆಸಿರುವ ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಐವರು ಮಕ್ಕಳು ಮತ್ತು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
    ಚಿಕ್ಕಮಗಳೂರು ನಗರದಲ್ಲಿ ಐವರು ಮಹಿಳೆಯರು ಮತ್ತು ಅವರೊಂದಿಗೆ ಇದ್ದ ಐದು ಮಕ್ಕಳನ್ನು ವಶಕ್ಕೆ ಪಡೆಯಲಾಗಿದೆ. ಮೂಡಿಗೆರೆಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದು, ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
    ಡಿಸಿ ಮತ್ತು ಎಸ್ಪಿ ಮಾರ್ಗದರ್ಶನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ. ಕಾರ್ಯಾಚರಣೆ ನಿರಂತರವಾಗಿ ನಡೆಯಲಿದ್ದು, ವಶಕ್ಕೆ ಪಡೆದ ಭಿಕ್ಷುಕರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೇಶ್ ತಿಳಿಸಿದರು.
    ವಶಕ್ಕೆ ಪಡೆದ ಭಿಕ್ಷುಕರನ್ನು ತಹಸೀಲ್ದಾರ್ ಮುಂದೆ ಹಾಜರುಪಡಿಸಲಾಗಿದೆ. ಜಿಲ್ಲೆಯ ಎಲ್ಲೆಡೆ ಈ ಕಾರ್ಯಾಚರಣೆ ಮುಂದುವರಿಯಲಿದ್ದು, ಬಾಲ ಕಾರ್ಮಿಕರು ಮತ್ತು ಭಿಕ್ಷುಕರು ಕಂಡರೆ ಪೊಲೀಸರು ಅಥವಾ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಎಎಸ್ಪಿ ಜಿ.ಕೃಷ್ಣಮೂರ್ತಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts