More

    ಬಾಲ್ಯವಿವಾಹ ಪದ್ಧತಿ ಇನ್ನೂ ಜೀವಂತ

    ಚನ್ನರಾಯಪಟ್ಟಣ: ಬಾಲ್ಯವಿವಾಹ ತಡೆಯುವುದು ಎಲ್ಲರ ಕರ್ತವ್ಯ ಎಂದು ಮೂರನೇ ಅಧಿಕ ಸಿವಿಲ್ ನ್ಯಾಯಾಧೀಶೆ ಸುನೀತಾ ತಿಳಿಸಿದರು.

    ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಬಿಜಿಎಸ್ ಪದವಿಪೂರ್ವ ಕಾಲೇಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಕಚೇರಿ ಸಹಯೋಗದಲ್ಲಿ ಪಟ್ಟಣದ ಬಿಜಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಬಾಲ್ಯ ವಿವಾಹ ನಿರ್ಮೂಲನೆ ಆಂದೋಲನ ಹಾಗೂ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ಜಾಗೃತಿ ದಿನ ಉದ್ಘಾಟಿಸಿ ಮಾತನಾಡಿದರು.
    ಗ್ರಾಮೀಣ ಪ್ರದೇಶದಲ್ಲಿ ಬಾಲ್ಯವಿವಾಹ ಹೆಚ್ಚು ನಡೆಯುತ್ತದೆ. ಇಂತಹ ಅನಿಷ್ಟ ಪದ್ಧತಿಯನ್ನು ತಡೆಗಟ್ಟಲು ಸರ್ಕಾರ ಹಲವು ಕಠಿಣ ಕಾನೂನು ರೂಪಿಸಿದ್ದರೂ ಈ ಪದ್ಧತಿ ಇನ್ನೂ ಜೀವಂತವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

    ಉಪನ್ಯಾಸಕಿ ಸಿ.ಎಲ್.ಭಾಗ್ಯ ಮಾತನಾಡಿ, ಬಾಲ್ಯ ವಿವಾಹ ಪದ್ಧತಿ ಎನ್ನುವುದು ದೊಡ್ಡ ಪಿಡುಗು. ಇದನ್ನು ತೊಡೆದು ಹಾಕುವುದು ಎಲ್ಲರ ಕರ್ತವ್ಯ ಎಂದರು.
    ಕಾರ್ಯಕ್ರಮದಲ್ಲಿ ವಕೀಲರ ಸಂಘದ ತಾಲೂಕು ಕಾರ್ಯದರ್ಶಿ ಸಿ.ಎನ್.ರಾಘವೇಂದ್ರ, ಜಂಟಿ ಕಾರ್ಯದರ್ಶಿ ಕಾವ್ಯಾ, ಬಿಜಿಎಸ್ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts