More

  ಬಾಲ್ಯ ವಿವಾಹಕ್ಕೆ ಮುಂದಾದರೆ ಕಾನೂನು ಕ್ರಮ

  ಮಾನ್ವಿ: ಬಾಲ್ಯ ವಿವಾಹಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಮದುವೆಯಾಗಲು ವರನಿಗೆ 21 ಹಾಗೂ ವಧುಗೆ 18 ವರ್ಷ ವಯಸ್ಸಾಗಿರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಶಿವರಾಜ ವಿ.ಸಿದ್ದೇಶ್ವರ ಹೇಳಿದರು.

  ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯ ಪದವಿ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಂಯುಕ್ತಾಶ್ರಯದಲ್ಲಿ ಬಾಲ್ಯವಿವಾಹ ಮತ್ತು ಬಾಲ್ಯವಿವಾಹ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಬಾಲ್ಯ ವಿವಾಹಕ್ಕೆ ಮುಂದಾದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದರು.

  ಸಿವಿಲ್ ನ್ಯಾಯಾಧೀಶ ಆಶಪ್ಪ ಸಣ್ಣಮನಿ ಮಾತನಾಡಿ, ಪಾಲಕರು ಬಾಲ್ಯ ವಿವಾಹಕ್ಕೆ ಒತ್ತಾಯಿಸಿದಲ್ಲಿ ಬಾಲಕಿಯರು ಹತ್ತಿರದಲ್ಲಿನ ಸರ್ಕಾರಿ ಕಚೇರಿ ಅಧಿಕಾರಿಗಳಿಗೆ ಮಾಹಿತಿ ನೀಡಿ ಇಲ್ಲವೇ ನೇರವಾಗಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದಲ್ಲಿ ಸಂಬಂಧಿಸಿದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯುವ ಮೂಲಕ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಬಾಲ್ಯವಿವಾಹ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆೆ 1098 ಹಾಗೂ 112 ಗೆ ಕರೆ ಮಾಡಲು ತಿಳಿಸಿದರು.

  ಹಿರಿಯ ವಕೀಲೆ ಶ್ಟೆಲ್ಲಾ ಶಾರ್ಲೆಟ್ ಬಾಲ್ಯವಿವಾಹ ವಿರೋಧಿ ಕಾಯ್ದೆಗಳ ಬಗ್ಗೆ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ರವಿಕುಮಾರ ಪಾಟೀಲ್, ಕಾರ್ಯದರ್ಶಿ ಚನ್ನಬಸವ ನಾಯಕ, ಸಹಾಯಕ ಸರ್ಕಾರಿ ಅಭಿಯೋಜಕಿ ಅರ್ಚನಾ ಯಾದವ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ, ನೇತಾಜಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಈ.ನರಸಿಂಹ, ಕಾಲೇಜಿನ ಉಪನ್ಯಾಸಕರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts