More

    ಬಾಲಕಿ ಅತ್ಯಾಚಾರ, ಕೊಲೆಗೆ ಆಕ್ರೋಶ: ಬಳ್ಳಾರಿಯಲ್ಲಿ ಮಹಿಳಾ ಸಾಂಸ್ಕೃತಿಕ ಸಂಘಟನೆ ಪ್ರತಿಭಟನೆ

    ಬಳ್ಳಾರಿ: ನೈಋತ್ಯ ದೆಹಲಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಜಿಲ್ಲಾ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿತು.

    ಸಮಿತಿಯ ಜಿಲ್ಲಾ ಅಧ್ಯಕ್ಷೆ ಶಾಂತಾ ಮಾತನಾಡಿ, ಉತ್ತರಪ್ರದೇಶದ ಹತ್ರಾಸ್ ಘಟನೆ ಮಾಸುವ ಮುನ್ನವೇ ನೈಋತ್ಯ ದೆಹಲಿಯಲ್ಲಿ ಮತ್ತೊಂದು ಅಂತಹದೇ ಘಟನೆ ನಡೆದಿದ್ದು, ದೇಶದ ಜನರನ್ನು ಬೆಚ್ಚಿಬೀಳಿಸಿದೆ. ನೀರು ತರಲು ಹೋದ 9 ವರ್ಷದ ಬಾಲಕಿಯ ಮೇಲೆ ಅಲ್ಲಿನ ಸ್ಮಶಾನದ ಪೂಜಾರಿ ಮತ್ತು ಇತರರು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ಬಾಲಕಿಯ ತಾಯಿ ಕೇಳಿದಾಗ ವಿದ್ಯುತ್ ತಗುಲಿ ಮೃತಪಟ್ಟಿದ್ದಾಳೆಂದು ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಳ್ಳದೆ ಘಟನೆಯನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆ ಎಂದು ದೂರಿದರು.

    ದೇಶಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳಾದರೂ ಹೆಣ್ಣಿಗೆ ರಕ್ಷಣೆ ಇಲ್ಲವಾಗಿದೆ. ಅತ್ಯಾಚಾರ, ದೌರ್ಜನ್ಯದ ಘಟನೆಗಳು ಹೆಚ್ಚುತ್ತಿವೆ. ಅದಕ್ಕೆ ಕಾರಣ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸದೆ ಓಡಾಡಲು ಅವಕಾಶ ಮಾಡಿಕೊಡುವ ಪೊಲೀಸ್ ಹಾಗೂ ಆಡಳಿತ ವ್ಯವಸ್ಥೆಯ ಬೇಜವಾಬ್ದಾರಿ. ಅಪ್ರಾಪ್ತ ಬಾಲಕಿಯ ಕೊಲೆಗೈದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಅಶ್ಲೀಲ ಸಿನಿಮಾ ಸಾಹಿತ್ಯವನ್ನು ನಿಷೇಧಿಸಬೇಕು. ವರ್ಮಾ ಸಮಿತಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts