More

    ತನ್ನ ಮಕ್ಕಳ ಮುಂದೆ ಅರೆಬೆತ್ತಲೆಯಾದ ರೆಹಾನಾಗೆ ಮತ್ತೊಂದು ಸಂಕಷ್ಟ!

    ತಿರುವನಂತಪುರಂ: ಅರೆನಗ್ನ ದೇಹದ ಮೇಲೆ ತನ್ನ ಮಕ್ಕಳಿಂದಲೇ ಡ್ರಾಯಿಂಗ್​ ಮಾಡಿಸಿಕೊಂಡು ವಿಡಿಯೋ ಹರಿಬಿಟ್ಟು ವಿವಾದ ಸೃಷ್ಟಿಸಿದ್ದ ಹೋರಾಟಾಗಾರ್ತಿ ರೆಹನಾ ಫಾತಿಮ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

    ಮೊನ್ನೆಯಷ್ಟೇ ಕೇರಳ ಪೊಲೀಸರು ರೆಹನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೀಗ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣ ಆಯೋಗ (ಎನ್​ಸಿಪಿಸಿಆರ್​) ಮಧ್ಯ ಪ್ರವೇಶಿಸಿದ್ದು, ಆದಷ್ಟು ಬೇಗ ತನಿಖೆ ನಡೆಸಿ ವರದಿ ಸಲ್ಲಿಸಲು ಕೇರಳ ಪೊಲೀಸರಿಗೆ ಗುರುವಾರ ಸೂಚಿಸಿದೆ.

    ಇದನ್ನೂ ಓದಿ: ಟಿಕ್​ ಟಾಕ್ ಸ್ಟಾರ್​​​ ಆತ್ಮಹತ್ಯೆಗೆ ಕಾರಣವೇನು? ಪೊಲೀಸರಿಗೆ ಸ್ಪೋಟಕ ಮಾಹಿತಿ ನೀಡಿದ ಕುಟುಂಬ​

    ಕೇರಳ ಪೊಲೀಸರಿಗೆ ಪತ್ರ ಬರೆದಿರುವ ಎನ್​ಸಿಪಿಸಿಆರ್, ಈ ವಿಚಾರವು ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಉಲ್ಲಂಘನೆಯಾಗಿದೆಯೇ ಎಂದು ಕಂಡುಹಿಡಿಯಲು ತನಿಖೆಯ ಅಗತ್ಯವಿದೆ. ಅಲ್ಲದೆ, ಮಕ್ಕಳು ತನ್ನ ತಾಯಿಯ ವರ್ತನೆಯಿಂದ ಮಾನಸಿಕ ಹಿಂಸೆಗೆ ಒಳಗಾಗಿತಬಹುದು. ಹೀಗಾಗಿ ಆಪ್ತ ಸಮಾಲೋಚನೆಯ ಅಗತ್ಯವಿದೆ ಎಂದು ಹೇಳಿದೆ.

    ತನ್ನ ಮಕ್ಕಳ ಮುಂದೆ ಅರೆಬೆತ್ತಲೆಯಾದ ರೆಹಾನಾಗೆ ಮತ್ತೊಂದು ಸಂಕಷ್ಟ!

    ತಾಯಿಯೇ ಇಂತಹ ಚಟುವಟಿಕೆಯಲ್ಲಿ ಮಕ್ಕಳೊಂದಿಗೆ ತೊಡಗಿಕೊಳ್ಳುವುದು ವಿಷಾದನೀಯ ಎಂದು ಜರಿದಿರುವ ಎನ್​ಸಿಪಿಸಿಆರ್, ಜಿಲ್ಲಾ ಮಕ್ಕಳ ರಕ್ಷಣಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಮೂಲಕ ಮಕ್ಕಳ ಆಪ್ತ ಸಮಾಲೋಚನೆಯನ್ನು ಖಾತ್ರಿ ಪಡಿಸಿಕೊಳ್ಳಬೇಕೆಂದು ಪೊಲೀಸರಿಗೆ ತಿಳಿಸಿದೆ. ಇದರೊಂದಿಗೆ ಸಂಪೂರ್ಣ ವರದಿಯನ್ನು ಏಳು ದಿನಗಳ ಒಳಗೆ ಸಲ್ಲಿಸಲು ಸೂಚಿಸಿದೆ.

    ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಪತ್ತೆಯಾಗಿರುವ ರೆಹನಾಗಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಬಂಧಿಸುವ ಸಾಧ್ಯತೆ ಇದೆ. ಅಲ್ಲದೆ, ಮಕ್ಕಳನ್ನು ವಿಚಾರಣೆ ನಡೆಸಲಿದ್ದಾರೆ.

    ಇದನ್ನೂ ಓದಿ: ಬಂದ್ರೆ ಬರಬೇಕು ಇಂಥಾ ಅದೃಷ್ಟ: ರಾತ್ರೋರಾತ್ರಿ 25 ಕೋಟಿ ರೂ. ಒಡೆಯನಾದ ಗಣಿಕೆಲಸಗಾರ!

    ಘಟನೆ ಹಿನ್ನೆಲೆ ಏನು?
    ರೆಹನಾ ಜೂನ್​ 19ರಂದು ತನ್ನ ಯೂಟ್ಯೂಬ್​ ಚಾನಲ್​ನಲ್ಲಿ ಬಾಡಿ ಆರ್ಟ್ಸ್​ ಪಾಲಿಟಿಕ್ಸ್​ (#BodyArtPolitics) ಎಂಬ ಅಡಿಬರಹದೊಂದಿಗೆ ವಿಡಿಯೋವೊಂದನ್ನು ಪೋಸ್ಟ್​ ಮಾಡಿದ್ದರು. ವಿಡಿಯೋದಲ್ಲಿ ರೆಹನಾ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ದೃಶ್ಯವಿದೆ. ವಿಡಿಯೋ ಮಾಡಿದ್ದರ ಉದ್ದೇಶದ ಬಗ್ಗೆ ತಿಳಿಸಿದ್ದ ರೆಹನಾ, ಲೈಂಗಿಕತೆ ಮತ್ತು ನಗ್ನತೆ ನಿಷೇಧವಾಗಿರುವ ಸಮಾಜದಲ್ಲಿ ಮಹಿಳೆಯರು ಲೈಂಗಿಕತೆ ಮತ್ತು ಅವರ ದೇಹದ ಬಗ್ಗೆ ಮುಕ್ತವಾಗಿರಬೇಕು ಎಂದು ಪುನರುಚ್ಚರಿಸುವುದಕ್ಕಾಗಿ ಈ ವಿಡಿಯೋವನ್ನು ಮಾಡಿದ್ದಾರಂತೆ.

    ತನ್ನ ಮಕ್ಕಳ ಮುಂದೆ ಅರೆಬೆತ್ತಲೆಯಾದ ರೆಹಾನಾಗೆ ಮತ್ತೊಂದು ಸಂಕಷ್ಟ!

    ಅಂದಹಾಗೆ ರೆಹನಾ ಅವರು ಬಿಎಸ್​ಎನ್​ಎಲ್​ ಮಾಜಿ ಉದ್ಯೋಗಿಯಾಗಿದ್ದಾರೆ. ಅಯ್ಯಪ್ಪ ಭಕ್ತರ ನಂಬಿಕೆಗೆ ನೋವುಂಟು ಮಾಡುವ ಫೇಸ್​ಬುಕ್​ ಪೋಸ್ಟ್​ ಹಾಕಿದ ಆರೋಪದಲ್ಲಿ ಈ ಹಿಂದೆ ಬಂಧಿತರಾಗಿ 18 ದಿನ ಜೈಲುವಾಸ ಅನುಭವಿಸಿದ್ದರು. ಅಲ್ಲದೆ, ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಹುದೆಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದ ಬಳಿಕ 2018ರ ಅಕ್ಟೋಬರ್​ನಲ್ಲಿ ರೆಹನಾ ಸಹ ಶಬರಿಮಲೆಗೆ ಭೇಟಿ ನೀಡುವ ಪ್ರಯತ್ನ ಮಾಡಿ, ಬಂಧಿತರಾಗಿ ಬಿಡುಗಡೆಯಾಗಿದ್ದರು. (ಏಜೆನ್ಸೀಸ್​)

    ಅರೆನಗ್ನ ದೇಹದ ಮೇಲೆ ತನ್ನ ಮಕ್ಕಳಿಂದಲೇ ಡ್ರಾಯಿಂಗ್​ ಮಾಡಿಸಿಕೊಂಡ ರೆಹನಾ ಫಾತಿಮಾಗೆ ಸಂಕಷ್ಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts