More

    ಅಕ್ಕನ ಬಳಗ ಶಾಲೆಯಲ್ಲಿ ಮಕ್ಕಳಿಗೆ ಸ್ವಾಗತ

    ನಗರದ ತ್ಯಾಗರಾಜ ರಸ್ತೆಯ ಅಕ್ಕನ ಬಳಗ ಶಾಲೆಯಲ್ಲಿ ಬುಧವಾರ ಶಿಕ್ಷಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ವಿದ್ಯಾರ್ಥಿಗಳಿಗೆ ಹೂವು ಎರಚಿ, ಹೂವು ಮತ್ತು ಸಿಹಿ ನೀಡಿ ಸ್ವಾಗತಿಸಲಾಯಿತು.

    ಅಕ್ಕನ ಬಳಗ ಶಾಲೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣವನ್ನು ರಂಗೋಲಿಯ ಚಿತ್ತಾರದೊಂದಿಗೆ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕವಿಟ್ಟು, ಹೂವು ನೀಡಿ, ಸಿಹಿ ಹಾಗೂ ಪಠ್ಯಪುಸ್ತಕ ಹಂಚುವ ಮೂಲಕ ಶಾಲೆಗೆ ಸ್ವಾಗತಿಸಲಾಯಿತು.

    ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ ಮಾತನಾಡಿ, ಮಕ್ಕಳು ಸಂತೋಷ ಹಾಗೂ ಖುಷಿಯಿಂದ ಶಾಲೆಗೆ ಆಗಮಿಸಬೇಕು. ಶಿಕ್ಷಕರು ಮಕ್ಕಳ ಎಳೆ ಮನಸ್ಸನ್ನು ಅರಿತುಕೊಂಡು ವಿದ್ಯಾದಾನ ಮಾಡಬೇಕು. ಮಕ್ಕಳು ಸಂಪೂರ್ಣವಾಗಿ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಳ್ಳಬೇಕು. ಬಾಹ್ಯ ಆಕರ್ಷಣೆಗಳಿಗೆ ಒಳಗಾಗಬಾರದು. ವಿದ್ಯೆಯ ಜತೆ ಸಂಸ್ಕೃತಿ, ಕಲೆಯನ್ನು ಹವ್ಯಾಸವನ್ನಾಗಿ ಮಾಡಿಕೊಳ್ಳಬೇಕು. ಆಗ ಜೀವನ ಪರಿಪೂರ್ಣವಾಗುತ್ತದೆ ಎಂದು ಕಿವಿಮಾತು ಹೇಳಿದರು.

    ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಚಿನ್ನ ಬೆಳ್ಳಿ ವ್ಯಾಪಾರ ಸಂಘದ ಅಧ್ಯಕ್ಷ ಸುರೇಶ್ ಗೋಲ್ಡ್, ಬೈರತಿ ಲಿಂಗರಾಜು, ಶಾಲೆಯ ಮುಖ್ಯ ಶಿಕ್ಷಕಿ ಸುಗುಣಾವತಿ, ಶಿಕ್ಷಕರಾದ ಶಿವಯ್ಯ, ಶಿಲ್ಪ, ನಾಗರತ್ನ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts