More

    ಕಾಯಂ ಶಿಕ್ಷಕರ ನೇಮಿಸದಿದ್ದರೆ ಮಕ್ಕಳ ಶಾಲೆಗೆ ಕಳಿಸಲ್ಲ

    ಬ್ಯಾಕೋಡು: ಕಾಯಂ ಶಿಕ್ಷಕರನ್ನು ನೇಮಕ ಮಾಡುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಸಾಗರ ತಾಲೂಕು ಕುದರೂರು ಗ್ರಾಪಂ ವ್ಯಾಪ್ತಿಯ ಕೊಡನವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪಾಲಕರು ಪಟ್ಟು ಹಿಡಿದಿದ್ದು, ಮಂಗಳವಾರದಿಂದ ಪ್ರತಿಭಟನೆ ಆರಂಭಿಸಿದ್ದಾರೆ.
    ನಮ್ಮೂರಿನ ಸರ್ಕಾರಿ ಶಾಲೆಯನ್ನು ಸರ್ಕಾರ ಕಡೆಗಣಿಸುತ್ತಿದೆ. ಕಳೆದ 2 ವರ್ಷಗಳಿಂದ ಮೂವರು ಅತಿಥಿ ಶಿಕ್ಷಕರಿರುವ ಮಾತ್ರ ಸೇವೆ ಸಲ್ಲಿಸುತ್ತಿದ್ದು, ಕಾಯಂ ಶಿಕ್ಷಕರ ಕೊರತೆ ಕಾಣಿಸುತ್ತಿದೆ. ಕಾಯಂ ಶಿಕ್ಷಕರು ಇಲ್ಲದಿರುವುದರಿಂದ ಮಕ್ಕಳ ಕಲಿಕೆಯಲ್ಲಿ ಹಿನ್ನಡೆಗೆ ಕಾರಣವಾಗಿದೆ ಎಂದು ಕೊಡನವಳ್ಳಿ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಸರ್ಕಾರದ ಈ ನಡೆಯಿಂದ ಬೇಸತ್ತ ಬಹುತೇಕ ಪಾಲಕರು ತಮ್ಮ ಮಕ್ಕಳನ್ನು ಅನ್ಯ ಶಾಲೆಗಳಿಗೆ ಸೇರಿಸಲು ತೀರ್ಮಾನಿಸಿದ್ದಾರೆ. ಕೆಲ ಪಾಲಕರು ಮಕ್ಕಳ ಶಾಲಾ ದಾಖಲಾತಿ ಕೊಡಿ ಎಂದು ಕೇಳುತ್ತಿದ್ದಾರೆ. ಈ ಕುರಿತು ಶಿಕ್ಷಣ ಇಲಾಖಾಧಿಕಾರಿಗಳಿಗೆ ಖುದ್ದು ಪಾಲಕರೇ ಬಹಳಷ್ಟು ಬಾರಿ ಗಮನಕ್ಕೆ ತರುವ ಪ್ರಯತ್ನ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಯಂ ಶಿಕ್ಷಕರ ನೇಮಕ ಮಾಡುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಜತೆಗೆ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಪಾಲಕರು ಎಚ್ಚರಿಕೆ ನೀಡಿದ್ದಾರೆ.

    ಶಾಲೆಗಳ ದಾಖಲಾತಿ, ಮಕ್ಕಳ ಸಂಖ್ಯೆ, ಶಿಕ್ಷಕರ ಲಭ್ಯತೆ ಆಧರಿಸಿ ಹೊಂದಾಣಿಕೆ ಮಾಡಿ ಶಿಕ್ಷಕರನ್ನು ಹಂಚಿಕೆ ಮಾಡುತ್ತಿದ್ದೇವೆ. ಒಂದು ವಾರದೊಳಗೆ ಕೊಡನವಳ್ಳಿ ಶಾಲೆಗೆ ಶಿಕ್ಷಕರನ್ನು ನೇಮಿಸಲಾಗುವುದು.

    ಪರಶುರಾಮಪ್ಪ
    ಕ್ಷೇತ್ರ ಶಿಕ್ಷಣಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts