More

    ಲೋಪವಿಲ್ಲದಂತೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಿ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜೂ.25ರಿಂದ ಆರಂಭವಾಗಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಯಾವುದೇ ಲೋಪವಿಲ್ಲದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

    ಜಿಪಂ ಸಭಾಂಗಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ ಕುರಿತು ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾಗದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಎಲ್ಲ್ಲ ವಿದ್ಯಾರ್ಥಿಗಳ ಮಾಹಿತಿ ಪಡೆದು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಮಲೆನಾಡು ಭಾಗಗಳಲ್ಲಿ ಅಗತ್ಯವಿದ್ದಲ್ಲಿ ಖಾಸಗಿ ವಾಹನಗಳನ್ನು ಬಳಸಿಕೊಳ್ಳಬೇಕು. ಸಾರಿಗೆ ವ್ಯವಸ್ಥೆ ಸಮಸ್ಯೆಯಿಂದ ಯಾವುದೇ ಮಕ್ಕಳು ಪರೀಕ್ಷೆ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಬಿಇಒ ಹಾಗೂ ಡಿಡಿಪಿಐ ಮಾರ್ಗದ ನಕ್ಷೆ ತಯಾರಿಸಿ ಸಾರಿಗೆ ಅಧಿಕಾರಿಗಳಿಗೆ ನೀಡಬೇಕು ಎಂದು ತಿಳಿಸಿದರು.

    ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿ ಎಲ್ಲ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು. ವಿವಿಧ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಜ್ವರದ ಲಕ್ಷಣ ಕಂಡುಬಂದಲ್ಲಿ ಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ಮೂಲಕ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts