ಅನೈತಿಕ ಸಂಬಂಧಕ್ಕೆ ಅಡ್ಡಿಯಾದರೆಂದು ಹೆತ್ತ ಮಕ್ಕಳಿಬ್ಬರನ್ನು ಕೊಂದೆ ಎಂದು ತಪ್ಪೊಪ್ಪಿಕೊಂಡಳು!

ಹುಬ್ಬಳ್ಳಿ: ಅನೈತಿಕ ಸಂಬಂಧಕ್ಕೆ ಮಕ್ಕಳು ಅಡ್ಡಿಯಾಗುತ್ತಾರೆ ಎಂದು ಅವರನ್ನು ತಾನೇ ಕೊಂದೆ ಎಂದು ಹಂತಕಿ ತಾಯಿಯೊಬ್ಬಳು ತಪ್ಪೊಪ್ಪಿಕೊಂಡಿದ್ದಾಳೆ.

ಬುಧವಾರ ಅಯೋಧ್ಯ ನಗರದಲ್ಲಿ ಇಬ್ಬರು ಮಕ್ಕಳ ಕೊಲೆ ನಡೆದಿತ್ತು. ಕೊಲೆ ಯಾರು ಮಾಡಿದ್ದರು ಎಂಬುದರ ಬಗ್ಗೆ ಮಾಹಿತಿ ಇರಲಿಲ್ಲ. ತನಿಖೆ ವೇಳೆ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದ್ದು, ಪ್ರೇಮಾ ಎಂಬ ಮಹಿಳೆ ಅನೈತಿಕ ಸಂಬಂಧಕ್ಕೆ ತೊಂದರೆಯಾಗಬಾರದು ಎಂದು ಮಕ್ಕಳನ್ನು ತಾನೇ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.

ಪ್ರಿಯಕರನ ಬಂಧನ

ವಿಚಾರಣೆ ನಂತರ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿರೇಶ ಗಂಗಾವತಿ ಎಂಬವನನ್ನೂ ಪೊಲೀಸರು ಬಂಧಿಸಿದ್ದಾರೆ. ವೀರೇಶ್​ ಸೂಚನೆ‌ ಮೇರೆಗೆ ಕೊಲೆ ಮಾಡಿದ್ದಾಗಿ ಆರೋಪಿ ತಿಳಿಸಿದ್ದಳು. ವೀರೇಶ್​ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

ಕೌಟುಂಬಿಕ ಕಲಹ: ಇಬ್ಬರು ಮಕ್ಕಳ ಕೊಲೆ ಮಾಡಿದ ತಾಯಿ