ಇಂಡಿ: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರಹಾಕಲು ಸರ್ಕಾರ ಜಾರಿಗೆ ತಂದಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್. ನಡಗಡ್ಡಿ ಹೇಳಿದರು.
ರಾಮನಗರ ಎಲ್‌ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾಯೋಜಕತ್ವದಲ್ಲಿ ಹಿರೇಬೇವನೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹಿರೇಬೇವನೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಹಳಷ್ಟು ಮಕ್ಕಳಲ್ಲಿ ಆಳವಾದ ಪ್ರತಿಭೆ ಇರುವುದನ್ನು ಗುರುತಿಸಿ ಪ್ರೋತ್ಸಾಹಿಸುವುದು ಪಾಲಕರು ಹಾಗೂ ಶಿಕ್ಷಕರ ಜವಾಬ್ದಾರಿಯಾಗಿದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೂ ಹೆಚ್ಚಿನ ಮಹತ್ವ ಕೊಟ್ಟರೆ ಮಾತ್ರ ಪ್ರತಿಭೆಗಳನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವೇ.ದಯಾನಂದ ಸ್ವಾಮಿ ಹಿರೇಮಠ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಿಆರ್‌ಪಿ ಬಗಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂಪಿಎಸ್ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಜು ಪಾತಾಳೆ ಅಧ್ಯಕ್ಷತೆ ವಹಿಸಿದ್ದರು.
ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ಡಿ. ಪಾಟೀಲ ಉದ್ಘಾಟಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ.ಟಿ.ಪಾಟೀಲ, ಕನ್ನಡ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಆರ್.ವಿ.ಪಾಟೀಲ, ಶಿಕ್ಷಕರ ಸಂಘದ ಬೆಳಗಾವಿ ವಿಭಾಗೀಯ ಉಪಾಧ್ಯಕ್ಷ ಎಸ್.ವಿ.ಹರಳಯ್ಯ, ಸರ್ಕಾರಿ ನೌಕರರ ಸಂಘದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಎಸ್.ಆರ್. ಪಾಟೀಲ, ಗ್ರಾಪಂ ಉಪಾಧ್ಯಕ್ಷ ಅರವಿಂದ ಮೈದರಗಿ, ಬಿಜೆಪಿ ಯುವ ಮುಖಂಡ ಆರ್.ಡಿ.ಪಾಟೀಲ, ರಾಮನಗರ ಎಲ್‌ಟಿ ಶಾಲಾ ಮುಖ್ಯ ಶಿಕ್ಷಕ ಮುಲ್ಲಾ, ಎಂಪಿಎಸ್ ಶಾಲೆಯ ಮುಖ್ಯಶಿಕ್ಷಕ ಆರ್.ಸಿ.ರಾಠೋಡ, ನಿವೃತ್ತ ಶಿಕ್ಷಕ ಬಿ.ಎಂ.ಬಿರಾದಾರ, ಸುರೇಶ ಚವ್ಹಾಣ, ಮುಖ್ಯಶಿಕ್ಷಕಿ ಬಿ.ಎಸ್.ಭಾಸಗಿ, ಕೆ.ಜಿ.ನಾಟಿಕಾರ, ಎನ್.ಎಲ್.ಹಚಡದ, ಎಸ್.ಆರ್.ಚಿಮ್ಮಲಗಿ, ಉರ್ದು ಸಿಆರ್‌ಪಿ ಬಿ.ಎಚ್. ಕುಮಸಗಿ, ಎಸ್.ಜಿ.ಅಂದೇವಾಡಿ ಇತರರಿದ್ದರು.