More

    ಮಕ್ಕಳಿಗೆ ಉಚಿತ, ಕಡ್ಡಾಯ ಶಿಕ್ಷಣ ಅವಶ್ಯ

    ಕೂಡ್ಲಿಗಿ: ಮಕ್ಕಳ ಹಕ್ಕುಗಳ ಸಂರಕ್ಷಣೆ ಜತೆಗೆ ಕಾನೂನು ಪಾಲನೆ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸುವುದು ಅಗತ್ಯ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಪಿ. ಶಿವರಾಜ್ ಹೇಳಿದರು.

    ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆ, ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲೆ ವಿಭಾಗ) ಸಹಯೋಗದೊಂದಿಗೆ, ಶನಿವಾರ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿ ಕಾಲೇಜು ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಕುರಿತು ವಿದ್ಯಾರ್ಥಿಗಳಿಗೆ ಕಾನೂನು ಅರಿವು-ನೆರವು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಇದನ್ನೂ ಓದಿ:ಪ್ರತಿಯೊಬ್ಬರಿಗೂ ಬೇಕು ಕಾನೂನು ಜ್ಞಾನ

    ಮಕ್ಕಳಿಗೆ ಸಾಧ್ಯವಾದಷ್ಟು ಉತ್ತಮ ಆರೋಗ್ಯ, ರಕ್ಷಣೆ, ಕುಡಿಯಲು ಶುದ್ಧನೀರು, ಆರೋಗ್ಯಕರ ಆಹಾರ ಮತ್ತು ವಾಸಿಸಲು ಸ್ವಚ್ಛ ಮತ್ತು ಸುರಕ್ಷಿತ ವಾತಾವರಣ ನಿರ್ಮಿಸಬೇಕು. 18 ವರ್ಷದ ಒಳಗಿನ ಮಕ್ಕಳು ಸರ್ಕಾರದ ಆದೇಶದಲ್ಲಿ ಜಾರಿಮಾಡಿದ ಮತ್ತು ಅಂತಾರಾಷ್ಟ್ರೀಯ ಕಾಯ್ದೆ ಪ್ರಕಾರ ಅನುಮೋದನೆ ಮಾಡಿದ ನಿಗದಿತ ಜೀವನ ಮಟ್ಟ ಮತ್ತು ಹಕ್ಕುಗಳನ್ನು ಹೊಂದಲು ಅರ್ಹತೆ ಪಡೆದಿರುತ್ತಾರೆ. ಇದರಲ್ಲಿ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣದ ಹಕ್ಕು ಇದೆ. ಅಪಾಯಕಾರಿ ಕೆಲಸಗಳಲ್ಲಿ ಮಕ್ಕಳನ್ನು ರಕ್ಷಿತರಾಗುವ ಹಾಗೂ ಆರ್ಥಿಕ ಕಾರಣಕ್ಕಾಗಿ ಸಾಮರ್ಥ್ಯಕ್ಕೆ ಅನುಗುಣವಲ್ಲದ ವೃತ್ತಿಯಲ್ಲಿ ತೊಡುಗುವುದನ್ನು ತಡೆಯಬೇಕು ಎಂದರು.

    ಶಿಕ್ಷಣದ ಬಗ್ಗೆ ಉಪನ್ಯಾಸ

    ವಕೀಲ ಡಿ.ಕರಿಬಸವರಾಜ ಮಕ್ಕಳ ಹಕ್ಕುಗಳ ಬಗ್ಗೆ ಹಾಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಬಗ್ಗೆ ಉಪನ್ಯಾಸ ನೀಡಿದರು. ಬಿಇಒ ಸಿ. ಬಸವರಾಜ ಮಾತಾನಾಡಿದರು. ಕಿರಿಯ ಶ್ರೇಣಿ ನ್ಯಾಯಾಧೀಶೆ ಸಿ. ಮಹಾಲಕ್ಷ್ಮೀ, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ್, ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಎಚ್.ವೆಂಕಟೇಶ್, ಮುಖ್ಯ ಶಿಕ್ಷಕ ಬಸವರಾಜ, ವಕೀಲರಾದ ಸಿ.ವಿರೂಪಾಕ್ಷಪ್ಪ, ಶೀಲಾ, ಈಶ್ವರಿ ಇತರರಿದ್ದರು.

    ನ್ಯಾಯಾಧೀಶರು ಮಕ್ಕಳ, ಶಾಲೆಯ ಕುಂದು-ಕೊರತೆಗಳ ಬಗ್ಗೆ ಆಲಿಸಿದರು. ಈ ಬಗ್ಗೆ ಇಲಾಖೆಯ ಗಮನಕ್ಕೆ ತಂದು ಪರಿಹಾರ ನೀಡಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts