25.7 C
Bangalore
Sunday, December 15, 2019

ಎಲ್ಲರಂತೆ ಸಮಾನವಾಗಿ ಬದುಕುವ ಹಕ್ಕು ಮಕ್ಕಳಿಗಿದೆ

Latest News

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಯಳಂದೂರು: ಇಂದಿನ ಮಕ್ಕಳು ಮುಂದಿನ ಪ್ರಜೆಗಳು ಎಂಬ ನಾಣ್ಣುಡಿಯನ್ನು ಬದಲಿಸಿ ಇಂದಿನ ಮಕ್ಕಳು ಇಂದಿನ ಪ್ರಜೆಗಳು ಎಂಬುದಾಗಿ ಮಾರ್ಪಾಡು ಮಾಡಿಕೊಳ್ಳಬೇಕು ಎಂದು ಯರಗಂಬಳ್ಳಿ ಗ್ರಾಪಂ ಪಿಡಿಒ ವೆಂಕಟಾಚಲಮೂರ್ತಿ ತಿಳಿಸಿದರು.

ತಾಲೂಕಿನ ಯರಗಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ಗ್ರಾಮಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಮಕ್ಕಳಿಗೆ ಅನೇಕ ಸವಲತ್ತುಗಳಿಗೆ ಅವರ ಹಕ್ಕುಗಳನ್ನು ಅವರಿಗೆ ನೀಡಬೇಕು. ಅದು ಸಿಗದಿದ್ದಾಗ ಪ್ರತಿಭಟಿಸಿ, ಅದನ್ನು ಪಡೆದುಕೊಳ್ಳುವ ಹಕ್ಕು ನಿಮಗಿದ್ದು ಇದರ ಬಳಕೆ ಮಾಡಿಕೊಳ್ಳಬೇಕು. ಎಲ್ಲರಂತೆ ಸಮಾನವಾಗಿ ಬದುಕುವ ಹಕ್ಕು ಮಕ್ಕಳಿಗಿದೆ. ಬಾಲ್ಯವಿವಾಹ, ಪೋಕ್ಸೊ ಕಾಯ್ದೆ, ಬಾಲಕಾರ್ಮಿಕ ಪದ್ಧತಿಯಂತಹ ವಿಚಾರಗಳನ್ನು ಮಕ್ಕಳಿಗೆ ಮನನ ಮಾಡಿಸುವ ಕೆಲಸವಾಗಬೇಕು ಎಂದು ಸಲಹೆ ನೀಡಿದರು.

ನೋಡಲ್ ಅಧಿಕಾರಿ ಹರೀಶ್ ಮಾತನಾಡಿ, ಮಕ್ಕಳಿಂದ ಬೇಗ ಬದಲಾವಣೆ ತರಲು ಸಾಧ್ಯ. ಇವರಿಗೆ ಶಾಲೆಗಳಲ್ಲಿ, ಇಂತಹ ಕಾರ್ಯಕ್ರಮಗಳಲ್ಲಿ ಸೂಕ್ತ ಮಾಹಿತಿಯೊಂದಿಗೆ ತರಬೇತುಗೊಳಿಸಿದ್ದೇ ಆದಲ್ಲಿ ಕುಟುಂಬಗಳಲ್ಲೂ ಬದಲಾವಣೆ ತರುವ ಚಾಕಚಕ್ಯತೆ ಮಕ್ಕಳಿಗೆ ಇರುತ್ತದೆ ಎಂದರು.

ಮಕ್ಕಳ ಹಕ್ಕುಗಳ ಬಗ್ಗೆ ಪಿಎಂಎಸ್‌ಆರ್ ಸಂಸ್ಥೆಯ ಮಹಾದೇವಮ್ಮ ಮಾಹಿತಿ ನೀಡಿದರು. ನಂತರ ಶಾಲಾ ಮಕ್ಕಳು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು.

ಗ್ರಾಪಂ ಅಧ್ಯಕ್ಷೆ ದಾಕ್ಷಾಯಣಿ, ಉಪಾಧ್ಯಕ್ಷ ಸಿದ್ದರಾಜು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸರಸ್ವತಿ, ಸಿಆರ್‌ಪಿ ಲಿಂಗರಾಜು, ಮುಖ್ಯಶಿಕ್ಷಕ ಮಲ್ಲಿಕಾರ್ಜುನ, ಶಿಕ್ಷಕ ರವಿಕುಮಾರ್, ವಿದ್ಯಾರ್ಥಿ ಪ್ರತಿನಿಧಿಗಳಾದ ಸಂಜನಾ, ಮಹೇಶ್ ಇದ್ದರು.

 

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...