More

    ಮಕ್ಕಳ ಕಲಿಕೆಗೆ ಪಾಲಕರ ಪ್ರೋತ್ಸಾಹ ಅಗತ್ಯ

    ಅಳವಂಡಿ: ಮಕ್ಕಳನ್ನು ಅನಿಷ್ಟ ಪದ್ದತಿಗಳಿಂದ ರಕ್ಷಿಸಿ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ ಎಂದು ಪಿಡಿಓ ಬಸವರಾಜ ಕೀರ್ದಿ ಹೇಳಿದರು.

    ಇದನ್ನೂ ಓದಿ: ಪಾಲಕರು ಮಕ್ಕಳಿಗೆ ಸಂಸ್ಕಾರ ಕಲಿಸಲಿ

    ಸಮೀಪದ ಬಿಸರಹಳ್ಳಿ ಗ್ರಾಪಂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ, ಜಿಪಂ, ತಾಪಂ ಸಹಯೋಗದಲ್ಲಿ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆಯಲ್ಲಿ ಸೋಮವಾರ ಮಾತನಾಡಿದರು.

    ಮಕ್ಕಳ ಶೈಕ್ಷಣಿಕ ಜೀವನದಲ್ಲಿ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿಗಳು ಭವಿಷ್ಯವನ್ನೆ ನಾಶ ಮಾಡುತ್ತಿವೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಮಕ್ಕಳಿಗೆ ಶಿಕ್ಷಣ ಕಡ್ಡಾಯ ಹಕ್ಕಾಗಿದೆ, ಕಾರಣ ಪಾಲಕರು ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡಬೇಕು ಹಾಗೂ ಮಕ್ಕಳ ಹಕ್ಕುಗಳನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸಿ ಮಕ್ಕಳು ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿ ಎಂದರು.

    ಗ್ರಾಪಂ ಅಧ್ಯಕ್ಷ ರವೀಂದ್ರಗೌಡ ಪಾಟೀಲ ಮಾತನಾಡಿ, ಮಕ್ಕಳಿಗೆ ಶಿಕ್ಷಣವೇ ಆಸ್ತಿ ಕಾರಣ ಪಾಲಕರು ಮಕ್ಕಳನ್ನು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರಲು ಎಲ್ಲರೂ ಪ್ರಯತ್ನಿಸಬೇಕು. ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದರು.

    ಉಪಾಧ್ಯಕ್ಷೆ ಸುಶಿಲವ್ವ, ಅಂಗನವಾಡಿ ಮೇಲ್ವಿಚಾರಕಿ ವಿಶಾಲಾಕ್ಷಿ, ಪ್ರಮುಖರಾದ ಆನಂದ ಮೇಗಳಮನಿ, ಮಲ್ಲಯ್ಯ ಮಠದ, ಬಸವರಾಜ ಬಿಕನಳ್ಳಿ, ಸಕ್ರಡ್ಡಿ ಹ್ಯಾಟಿ, ಪರಶುರಾಮ ಕೊರವರ, ಸಿಆರ್‌ಪಿ ಬಸವರಾಜ, ಆರೋಗ್ಯ ನೀರಿಕ್ಷಣಾಧಿಕಾರಿ ಬಸವರಾಜ ಗಾಳಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts