More

    ಮಕ್ಕಳಿಗೆ ಪರಿಸರ ರಕ್ಷಣೆಯ ಜಾಗೃತಿ ಅಗತ್ಯ

    ಬೇಲೂರು: ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಪರಿಸರ ನಾಶವಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ಪರಿಸರ ರಕ್ಷಣೆಯ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸುವ ಅವಶ್ಯಕತೆ ಇದೆ ಎಂದು ಕೆಸಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಸಂಪತ್ ಹೇಳಿದರು.

    ತಾಲೂಕಿನ ಬಿಕ್ಕೋಡು ಹೋಬಳಿ ಕೆಸಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಸ್ಯ ಶ್ಯಾಮಲಾ ಯೋಜನೆಯಡಿ ಶಾಲಾವರಣ ವಿದ್ಯಾರ್ಥಿಗಳೊಂದಿಗೆ ಶನಿವಾರ ಗಿಡನೆಟ್ಟು ಮಾತನಾಡಿದರು. ಶಾಲೆಗಳಲ್ಲಿ ಪಠ್ಯದ ಜತೆಗೆ ಪರಿಸರ ಕಾಳಜಿ ಹಾಗೂ ಸಂರಕ್ಷಣೆ ಬಗ್ಗೆ ಶಿಕ್ಷಕರು ಮತ್ತು ಪಾಲಕರು ತಿಳಿಸಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಸಾಕ್ಷರತಾ ಇಲಾಖೆಯಿಂದ ಸಸ್ಯ ಶ್ಯಾಮಲಾ ಯೋಜನೆಯಡಿ ಶಾಲೆಗಳ ಆವರಣದಲ್ಲಿ 5 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳಿಂದಲೇ ಗಿಡಗಳನ್ನು ನೆಡಿಸಿ ಪೋಷಿಸುವ ಕೆಲಸ ಮಾಡುತ್ತಿದ್ದೇವೆ ಎಂದರು. ಶಿಕ್ಷಕ ಹರೀಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts