More

    ಮಕ್ಕಳ ಪೋಷಣೆ, ರಕ್ಷಣೆ ಎಲ್ಲರ ಹೊಣೆ

    ಬೆಳಗಾವಿ: ಮಕ್ಕಳ ರಕ್ಷಣೆ, ಪೋಷಣೆ, ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಕ್ಕಳ ಸಂರಕ್ಷಣೆಗೆ ಒಗ್ಗಟಾಗಿ ಕೆಲಸ ಮಾಡುವುದು ಅವಶ್ಯಕವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ. ಜೋಶಿ ಹೇಳಿದ್ದಾರೆ.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಕ್ಕಳ ರಕ್ಷಣಾ ಮಾಸಾಚರಣೆ ಬೃಹತ್ ಆಂದೋಲನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.

    ಬೆಳಗಾವಿಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಬೇಕು. ಯಾವುದೇ ರೀತಿಯ ಆಪತ್ತು ಅಥವಾ ಮಕ್ಕಳಿಗೆ ತೊಂದರೆ ಎದುರಾದಾಗ ಸ್ಥಳದಲ್ಲಿದ್ದವರು ಅವರ ರಕ್ಷಣೆಗಾಗಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಬೇಕು ಎಂದು ಸಲಹೆ ನೀಡಿದರು.

    ಇದೇ ಸಂದರ್ಭದಲ್ಲಿ ಭಿಕ್ಷಾಟನೆ ತಡೆಗಟ್ಟುವಿಕೆಗೆ ಸಂಬಂಧಿಸಿದಂತೆ ಉಪ ಪೋಲಿಸ್ ಆಯುಕ್ತ ಚಂದ್ರಶೇಖರ ನೀಲಗಾರ ಅವರು ಧ್ವನಿ ಮುದ್ರಿಕೆ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವ ಕಾರ್ಯದರ್ಶಿ ವಿಜಯ ದೇವರಾಜ ಅರಸ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ ರತ್ನಾಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ವಿ. ಮುನ್ಯಾಳ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts