More

    ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಚಾಕಲೇಟ್

    ನಿಪ್ಪಾಣಿ: ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಟಿಕಾಂಶ ಯುಕ್ತ ಚಾಕಲೇಟ್ ವಿತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ನಗರದ ಶಿವಶಂಕರ ಜೊಲ್ಲೆ ಪಬ್ಲಿಕ್ ಸ್ಕೂಲ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಕ್ಕಳಿಗೆ ಚಾಕಲೇಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕರೊನಾ ವೈರಸ್ ವಿರುದ್ಧ ಹೋರಾಡಲು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸ್ಥಳೀಯ ಮಹಾವೀರ ಆರೋಗ್ಯ ಕೇಂದ್ರದಿಂದ ಸುಮಾರು ಒಂದು ಲಕ್ಷ ಜನರಿಗೆ ಅರ್ಸೆನಿಕ್ ಅಲ್ಬ್‌ಂ-30 ಹೋಮಿಯೋಪಥಿಕ್ ಮಾತ್ರೆಗಳನ್ನು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆಮನೆಗೆ ಹೋಗಿ ವಿತರಿಸುವರು ಎಂದು ಹೇಳಿದರು.

    ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಕರೊನಾ ಸೇನಾನಿಗಳ ಕಾರ್ಯ ಶ್ಲಾಘನೀಯ ಎಂದರು. ಸಿಪಿಐ ಸಂತೋಷ ಸತ್ಯನಾಯಿಕ, ನಗರಸಭೆ ಪೌರಾಯುಕ್ತ ಮಹಾವೀರ ಬೋರಣ್ಣವರ, ಸಾಹಿಲ್ ಶಹಾ, ಬಂಡಾ ಘೋರ್ಪಡೆ ಮಾತನಾಡಿದರು. ಯಕ್ಸಂಬಾದ ಜೊಲ್ಲೆ ಉದ್ಯೋಗ ಸಮೂಹದಡಿಯಲ್ಲಿ ಸ್ಥಳೀಯ ನೋಂದಾಯಿತ ಅಸಂಘಟಿತ 2.5 ಸಾವಿರ ಕಾರ್ಮಿಕರಿಗೆ ಆಹಾರದ ಕಿಟ್, ತಾಲೂಕಿನ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡೆ ವಿತರಿಸಲಾಯಿತು. ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಚೇರ್ಮನ್ ಚಂದ್ರಕಾಂತ ಕೋಠಿವಾಲೆ, ಸಂಚಾಲಕ ಪಪ್ಪು ಪಾಟೀಲ, ರಾಮಗೊಂಡಾ ಪಾಟೀಲ, ಪ್ರಕಾಶ ಶಿಂಧೆ, ಮಹಾವೀರ ಆರೋಗ್ಯ ಕೇಂದ್ರದ ಅಧ್ಯಕ್ಷ ಪ್ರಕಾಶ ಶಹಾ, ಶಾರದಾ, ತಹಸೀಲ್ದಾರ್ ಪ್ರಕಾಶ ಗಾಯಕವಾಡ, ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದು ನರಾಟೆ, ಡಾ. ಶ್ರೀಕಾಂತ ಶಿನ್ನೊಳ್ಳಿ,
    ಡಾ. ಸೀಮಾ ಗುಂಜಾಳ, ಸಿಡಿಪಿಒ ಸುಮಿತ್ರಾ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts