More

    ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಜನರ ಸಹಕಾರ ಅಗತ್ಯ

    ಹೊಸಪೇಟೆ: ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದರೊಂದಿಗೆ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿಪಂ ಸಿಇಒ ಸದಾಶಿವ ಪ್ರಭು ಹೇಳಿದರು.

    ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಲ್ಲಿ ಶುಕ್ರವಾರ ಮಕ್ಕಳ ಸಹಾಯವಾಣಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

    ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಸತ್ಪ್ರಜೆಯನ್ನಾಗಿ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಮಕ್ಕಳು ಭಿಕ್ಷಾಟನೆ, ಅಂಗಡಿ, ಮಾಲ್‌ಗಳಲ್ಲಿ ಕೆಲಸ ಮಾಡುತ್ತಿದ್ದರೆ ರಕ್ಷಿಸಬೇಕು. ಮಾದಕ ವಸ್ತುಗಳ ಅಡ್ಡ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕಿದೆ. ಮಕ್ಕಳ ರಕ್ಷಣೆಗಾಗಿ ಚೈಲ್ಡ್ ಹೆಲ್ಪ್‌ಲೈನ್ 1098 ದಿನದ 24 ಗಂಟೆ ಕೆಲಸ ಮಾಡುತ್ತಿದ್ದು, ಕರೆ ಮಾಡಿ ತಿಳಿಸಬಹುದಾಗಿದೆ. ಮಾಹಿತಿ ನೀಡಿದವರ ಹೆಸರು ಗೌಪ್ಯವಾಗಿ ಇಡಲಾಗುತ್ತದೆ. ಮಕ್ಕಳ ರಕ್ಷಣೆಯಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದರು.

    ಜಿಲ್ಲಾ ಮಕ್ಕಳ ಘಟಕದ ರಕ್ಷಣಾಧಿಕಾರಿ ಸುದೀಪ್ ಮಾತನಾಡಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ನಿರೂಪಣಾಧಿಕಾರಿ ಸುಭದ್ರಾದೇವಿ, ಜಿಲ್ಲಾ ಅಂಗವಿಕಲ ಕಲ್ಯಾಣಧಿಕಾರಿ ಅವಿನಾಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts