More

    ಮಕ್ಕಳಲ್ಲಿ ಓದುವ ಹವ್ಯಾಸ ರೂಢಿಸಿ: ಚಿರಡೋಣಿ ಗ್ರಾಮದಲ್ಲಿ ಧರ್ಮಸ್ಥಳ ಒಕ್ಕೂಟಗಳ ಪದಗ್ರಹಣದಲ್ಲಿ ಡಾ.ಮಂಜುನಾಥ್ ಸಲಹೆ

    ಚನ್ನಗಿರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಹೊಸ ಯೋಜನೆ ಜಾರಿಗೆ ತಂದು ಜನಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಈ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದೆ ಎಂದು ಸಂಸ್ಥೆಯ ಸಿಇಒ ಡಾ.ಎಲ್.ಎಚ್.ಮಂಜುನಾಥ್ ತಿಳಿಸಿದರು.

    ಬಸವಾಪಟ್ಟಣ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸೋಮವಾರ ತಾಲೂಕಿನ ಚಿರಡೋಣಿ ಗ್ರಾಮದಲ್ಲಿ ಆಯೋಜಿಸಿದ್ದ ಒಕ್ಕೂಟಗಳ ಪದಗ್ರಹಣ, ಸಾಧನಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

    ದಾವಣಗೆರೆ ಜಿಲ್ಲೆಗೆ ಸಂಸ್ಥೆಯು ಸಂಪೂರ್ಣ ಸುರಕ್ಷಾ ಯೋಜನೆ ಜಾರಿಗೆ ತಂದು ಆರೋಗ್ಯ ಕಾಪಾಡುವ ಕೆಲಸ ಮಾಡುತ್ತಿದೆ. ಇಂದು ಟಿವಿ, ಮೊಬೈಲ್ ಬಳಕೆಯಿಂದ ಅನೇಕ ದುರಂತಗಳು ಸಂಭವಿಸುತ್ತವೆ. ಇದರ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಬೇಕು. ಶಿಸ್ತು, ಸಂಸ್ಕಾರದಿಂದ ಬದುಕು ಬದಲಾಗಬೇಕು ಎಂದು ತಿಳಿಸಿದರು.

    ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ ಮಾತನಾಡಿ, ಧರ್ಮಸ್ಥಳ ಸಂಸ್ಥೆಯು ಮಹಿಳಾ ಸಬಲೀಕರಣ, ಬಡವರ ಅಭಿವೃದ್ಧಿಯ ಧ್ಯೇಯವಾಗಿಸಿಕೊಂಡಿದೆ ಎಂದರು.

    ಹೊಟ್ಯಾಪುರ ಹಿರೇಮಠ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts