ಮಕ್ಕಳಿಗೆ ಮನೆಯಲ್ಲಿ ಸಂಸ್ಕಾರ ಕೊಡಬೇಕು

gan (9)
Published on

ಕುಂದಾಪುರ: ಶಿಕ್ಷಕರೇ ವಿದ್ಯಾರ್ಥಿಗಳ ದಾರಿದೀಪ. ಪೋಷಕರು ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕೊಡಬೇಕು. ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಧಾರಾವಾಹಿ ನೋಡುತ್ತಾ ಕುಳಿತುಕೊಳ್ಳುವುದಕ್ಕಿಂತ ಮಕ್ಕಳ ಜತೆ ಕುಳಿತು ಅವರ ಓದಿನ ಕಡೆ ಗಮನ ಹರಿಸಬೇಕು ಎಂದು ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ವಾರಣಕಟ್ಟೆ ಕೃಷ್ಣಮೂರ್ತಿ ಮಂಜ ಹೇಳಿದರು.

ಚಿತ್ತೂರಿನ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಗುರುವಾರ ಸಮವಸ್ತ್ರ, ಕಲಿಕಾ ಪರಿಕರ ವಿತರಣೆ ಕಾರ್ಯಕ್ರಮದಲ್ಲಿ ವಾತನಾಡಿದರು.

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಟ್ರಸ್ಟ್‌ನ ಶೈಕ್ಷಣಿಕ ಕಾಳಜಿಯನ್ನು ಶ್ಲಾಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಡಾ.ರಾಜೇಶ್ ಬಾಯರಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಕ ಗೋವಿಂದ ಶೆಟ್ಟಿ- ಸವಿತಾ ದಂಪತಿಯನ್ನು ಸನ್ಮಾನಿಸಲಾಯಿತು.

ಬೈಂದೂರು ವಲಯ ಕ್ಷೇತ್ರ ಶಿಕಣಾಧಿಕಾರಿ ನಾಗೇಶ್ ನಾಯ್ಕ, ಡಾ.ಅತುಲ್ ಕುವಾರ್ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ, ವಂಡ್ಸೆ ಸಿ.ಎ. ಬ್ಯಾಂಕ್ ನಿವೃತ್ತ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಪೂಜಾರಿ, ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಚಿತ್ತೂರು ಗ್ರಾಮ ಪಂಚಾಯಿತಿ ವಾಜಿ ಅಧ್ಯಕ್ಷೆ ಜಯಂತಿ ಪೂಜಾರಿ, ಚಿತ್ತೂರು ಪ್ರೌಢ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಗೌರಿ ಅಡಿಗ, ಎಸ್‌ಡಿಎಂಸಿ ಉಪಾಧ್ಯಕ್ಷೆ ಲತಾ ಆಚಾರ್ಯ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಗೀತಾ ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕಿ ದೀಪಾ ವಂದಿಸಿದರು. ಶಿಕ್ಷಕ ಗುರುರಾಜ್ ದೇವಾಡಿಗ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net