ಮಕ್ಕಳಿಗೆ ಬಾಲ್ಯದಲ್ಲೇ ರಾಷ್ಟ್ರಭಕ್ತಿ ಅರಿವು

gan-9
Published on

ಗಂಗೊಳ್ಳಿ: ಬಾಲ್ಯದಲ್ಲೇ ಮಕ್ಕಳಿಗೆ ರಾಷ್ಟ್ರಭಕ್ತಿ, ಧರ್ಮ ಹಾಗೂ ಸಂಸ್ಕೃತಿ ಕುರಿತು ಅರಿವು ಮೂಡಿಸಿದಲ್ಲಿ ಭವಿಷ್ಯದ ಸತ್ಪ್ರಜೆಗಳಾಗಲಿದ್ದಾರೆ. ಶಿಶುಮಂದಿರಗಳಲ್ಲಿ ಮಾತಾಜಿಯರು ಈ ಕೆಲಸ ಮಾಡುತ್ತಿರುವುದು ಶ್ಲಾಘನಾರ್ಹ ಎಂದು ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಹೇಳಿದರು.

ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಜಯವಂತ ನಾಯಕ್ ಸಭಾಭವನದಲ್ಲಿ ಶನಿವಾರ ಶಿಶು ಮಂದಿರದ ಮಕ್ಕಳ ಶುಭ ವಿದಾಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಎನ್.ಪ್ರಕಾಶ್ ನಾಯಕ್ ಗಂಗೊಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣಮೂರ್ತಿ ಕಿಣಿ ಶುಭಹಾರೈಸಿದರು. ಶಿಶು ಮಂದಿರ ಮಾಜಿ ಅಧ್ಯಕ್ಷೆ ಸವಿತಾ ಎನ್.ದೇವಾಡಿಗ ಮಾತನಾಡಿದರು. ಶಿಶು ಮಂದಿರದಿಂದ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಶಿಶು ಮಂದಿರ ಸದಸ್ಯರಾದ ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಮಾತಾಜಿ ರತ್ನ ಮೊದಲಾದವರು ಉಪಸ್ಥಿತರಿದ್ದರು. ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಡಾ.ಕಾಶೀನಾಥ ಪೈ ಪ್ರಸ್ತಾವನೆಗೈದರು. ಅಶ್ವಿತಾ ಜಿ.ಪೈ ವಂದಿಸಿದರು. ಮಾಜಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net