More

    ಮಕ್ಕಳಲ್ಲಿ ಅನಾಥರೆಂಬ ಭಾವನೆ ಹೋಗಲಾಡಿಸಿ

    ಬಾಗಲಕೋಟೆ: ಕಾರಣಾಂತರಗಳಿಂದ ತಂದೆ-ತಾಯಿಯರನ್ನು ಕಳೆದುಕೊಂಡು ಮಕ್ಕಳಲ್ಲಿ ಅನಾಥರೆಂಬ ಭಾವನೆ ಮೂಡದಂತೆ ನೋಡಿಕೊಳ್ಳಬೇಕು ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.
    ನವನಗರದ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರದಲ್ಲಿ ಸೋಮವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಸರ್ಕಾರ ಅನಾಥ ಮಕ್ಕಳಿಗೆ ಎಲ್ಲ ರೀತಿಯ ಸೌಲಭ್ಯ ನೀಡುತ್ತಿದ್ದು, ಶಿಕ್ಷಕರು ಇಂತಹ ಮಕ್ಕಳನ್ನು ತಮ್ಮ ಮಕ್ಕಳೆಂಬ ಭಾವನೆಹೊಂದಬೇಕು ಎಂದರು.
    ಜನನ ಮರಣ ನಮ್ಮ ಕೈಯಲ್ಲಿ ಇಲ್ಲ. ಬಾಲ ಮಂದಿರದಲ್ಲಿರುವ ಮಕ್ಕಳು ಗುರಿಯನ್ನು ಇಟ್ಟುಕೊಂಡು ಬೆಳೆಯಬೇಕು. ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ ಅವರು ಅನಾಥ ಮಕ್ಕಳ ಮೇಲೆ ಹೆಚ್ಚಿನ ಮುತುವರ್ಜಿ ವಹಿಸುತ್ತಿದ್ದಾರೆ. ಮಕ್ಕಳಿಗೆ ಪ್ರವಾಸಿ ತಾಣಗಳ ವೀಕ್ಷಣೆ ಕೂಡಾ ಮಾಡಿಸುತ್ತಿದ್ದಾರೆ. ಪ್ರಧಾನ ಮಂತ್ರಿಗಳು ಕೂಡಾ ಅನಾಥ ಮಕ್ಕಳಿಗೆ ಆದ್ಯತೆ ಮೇರೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳ ಸದುಪಯೋಗವಾಗುವಂತೆ ಅಽಕಾರಿಗಳು ಮಾಡಬೇಕು ಎಂದು ತಿಳಿಸಿದರು.
    ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ, ಜಿ.ಪಂ ಸಿಇಒ ಟಿ.ಭೂಬಾಲನ್, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts