ಅಮೃತಭಾರತಿ ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ

amrutha bharati
ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯ ಮಕ್ಕಳ ದಿನಾಚರಣೆಯಲ್ಲಿ ಅಮೃತ ಭಾರತಿ ವಿದ್ಯಾಲಯ ಅಧ್ಯಕ್ಷ ಶೈಲೇಶ್ ಕಿಣಿ ಮಾತಾನಾಡಿದರು. ಮುಖ್ಯಶಿಕ್ಷಕಿ ಶಕುಂತಳಾ, ಮಹೇಶ್ ಹೈಕಾಡಿ ಉಪಸ್ಥಿತರಿದ್ದರು.
Published on

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆ ನಡೆಯಿತು. ಅಮೃತ ಭಾರತಿ ವಿದ್ಯಾಲಯ ಅಧ್ಯಕ್ಷ ಶೈಲೇಶ್ ಕಿಣಿ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ಚಟುವಟಿಕೆಯಿಂದ ಕೂಡಿರಬೇಕು. ಹಲವಾರು ಚಟುವಟಿಕೆಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಉತ್ತಮ ಮಾರ್ಗದರ್ಶನ ನೀಡುತ್ತದೆ. ಸೈಕಲ್ ಸವಾರಿ, ಈಜು ರೀತಿಯ ದೈಹಿಕ ಕ್ಷಮತೆ ಇರುವ ಚಟುವಟಿಕೆಗಳನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಕರಗತ ಮಾಡಿಕೊಂಡಿರಬೇಕು ಎಂದರು. ಅಮೃತ ಭಾರತಿ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಶಕುಂತಳಾ, ಮಹೇಶ್ ಹೈಕಾಡಿ, ವಿದ್ಯಾರ್ಥಿಗಳಿದ್ದರು. ಹೇಮಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net