ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿಯ ಸುನಿಧಿ ಕಲಾ ಸೌರಭ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಫೆ . 18ರಂದು ಸಂಜೆ 5 ಗಂಟೆಗೆ ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಮಕ್ಕಳ ನಾಟಕೋತ್ಸವ ಏರ್ಪಡಿಸಲಾಗಿದೆ ಎಂದು ರಂಗಾಯಣ ಮಾಜಿ ನಿರ್ದೇಶಕ ಸುಭಾಸ ನರೇಂದ್ರ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಂಸ್ಕಾರ ಭಾರತಿ ಕರ್ನಾಟಕ ಉತ್ತರ ಪ್ರಾಂತ ಪ್ರಧಾನ ಕಾರ್ಯದರ್ಶಿ ಡಾ. ಶಶಿಧರ ನರೇಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಕುಮಾರ ಬೆಕ್ಕೇರಿ, ಅಶೋಕ ಸಿಂದಗಿ, ಅಶೋಕ ಗರಗದ ಆಗಮಿಸುವರು. ಮಕ್ಕಳ ಸಾಹಿತಿ ನಿಂಗಣ್ಣ ಕುಂಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ನಂತರ ಶೃತಿ ಹುರಳಿಕೊಪ್ಪ ನಿರ್ದೇಶನದ ಮಳೆ ಮಾಯೆ ನಾಟಕವನ್ನು ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳು ಹಾಗೂ ಸಿಂಕದರ್ ದಂಡಿನ ನಿರ್ದೇಶನದ ಮುತ್ತಿನ ರಾಶಿ ನಾಟಕವನ್ನು ನಗರದ ರಂಗ ಸಾಮ್ರಾಟ ಅಭಿನಯ ಶಾಲೆ ತಂಡ ಪ್ರಸ್ತುತಪಡಿಸಲಿವೆ ಎಂದರು.
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸುವ ನಿಟ್ಟಿನಲ್ಲಿ ಸುನಿಧಿ ಕಲಾ ಸೌರಭ ವತಿಯಿಂದ ದುರ್ಗಾ ಕಾಲನಿಯ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ನಿರ್ದೇಶಕ ಸಿಂಕದರ್ ದಂಡಿನ್ ಮತ್ತು ಶೃತಿ ಹುರಳಿಕೊಪ್ಪ ನೇತೃತ್ವದಲ್ಲಿ 20 ದಿನಗಳ ಅಭಿನಯ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ತರಬೇತಿ ಪಡೆದ ಮಕ್ಕಳಿಗೆ ವೇದಿಕೆ ಕಲ್ಪಿಸಲು ನಾಟಕೋತ್ಸವ ಏರ್ಪಡಿಸಲಾಗಿದೆ. ನಾಟಕದಲ್ಲಿ ಭಾಗವಹಿಸದ ಮಕ್ಕಳಿಗೆ ಸಾಮೂಹಿಕ ನೃತ್ಯ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದರು.
ಮಕ್ಕಳ ನಾಟಕೋತ್ಸವ 18ರಂದು

You Might Also Like
18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs
Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…
ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips
ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…
ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips
ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…