ಸೋಮವಾರಪೇಟೆ: ನಾವು ಪ್ರತಿಷ್ಠಾನ ಕೊಡಗು, ಪ್ರಕೃತಿ ಫೌಂಡೇಷನ್ ಅರಸೀಕೆರೆ ಇವರ ಸಹಯೋಗದೊಂದಿಗೆ ಕೂಗೇಕೋಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಮಕ್ಕಳ ಗ್ರಾಮಸಭೆ, ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಮಕ್ಕಳ ಸಹಾಯವಾಣಿ ಮಾಹಿತಿ ಕಾರ್ಯಾಗಾರ ನಡೆಯಿತು. ಸದಸ್ಯ ಪ್ರಜ್ವಲ್, ರವಿಚಂದ್ರನ್ ಶಾಲಾ ಶಿಕ್ಷಕಿ ಮಂಜುಳಾ ಇದ್ದರು.